ETV Bharat / state

ಚುನಾಯಿತ ಎಂಎಲ್ಎ, ಎಂಎಲ್ಸಿ ವಿರುದ್ಧ ರಾಜ್ಯ ಬಿಜೆಪಿ ಕ್ರಮ ತೆಗೆದುಕೊಳ್ಳುವಂತಿಲ್ಲ: ಕೆ.ಎಸ್.ಈಶ್ವರಪ್ಪ - shivmogga latest news

ಚುನಾಯಿತ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಬಗ್ಗೆ ಕ್ರಮ ತೆಗದುಕೊಳ್ಳಲು ರಾಜ್ಯ ಬಿಜೆಪಿ ಘಟಕಕ್ಕೆ ಅವಕಾಶವಿಲ್ಲ. ಹೀಗಾಗಿ ಕೇಂದ್ರ ಶೀಘ್ರವೇ ಯತ್ನಾಳ್ ವಿರುದ್ಧ ಕ್ರಮ ತೆಗೆದುಕೊಳ್ಳಲಿದೆ ಎಂದು ಕೆ ಎಸ್​ ಈಶ್ವರಪ್ಪ ಹೇಳಿದ್ದಾರೆ.

K S Eshwarappa reaction on MLA Yatnal statement
ಕೆ.ಎಸ್.ಈಶ್ವರಪ್ಪ
author img

By

Published : Feb 8, 2021, 2:56 PM IST

ಶಿವಮೊಗ್ಗ: ರಾಜ್ಯ ಬಿಜೆಪಿಯಲ್ಲಿ ಚುನಾಯಿತ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಬಗ್ಗೆ ಕ್ರಮ ತೆಗದುಕೊಳ್ಳಲು ರಾಜ್ಯ ಬಿಜೆಪಿ ಘಟಕಕ್ಕೆ ಅವಕಾಶವಿಲ್ಲ. ಇದರಿಂದ ಕೇಂದ್ರ ಬಿಜೆಪಿ ಘಟಕ ಶೀಘ್ರದಲ್ಲಿ ಕ್ರಮ ತೆಗೆದುಕೊಳ್ಳಲಿದೆ ಎಂದು ಶಾಸಕ ಯತ್ನಾಳ್ ವಿರುದ್ಧ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದರು.

ಶಾಸಕ ಯತ್ನಾಳ್ ಅವರು ಸಿಎಂ ಯಡಿಯೂರಪ್ಪ ಹಾಗೂ ಸರ್ಕಾರದ ವಿರುದ್ಧ ಅಪಾದನೆ ಮಾಡುತ್ತಾ ಬರುತ್ತಾ ಇದ್ದಾರೆ. ಹೀಗೆ ಹೇಳಿಕೆ ನೀಡಬೇಡಿ ಎಂದು ಹೇಳಿದ್ರೂ ಕೂಡ ಅವರು ಹಾಗೆ ಮುಂದುವರೆಸುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಬಿಜೆಪಿ ಕ್ರಮ ತೆಗೆದುಕೊಳ್ಳುವ ಭರವಸೆ ಇದೆ ಎಂದರು.

ಯತ್ನಾಳ ವಿರುದ್ದ ಕೇಂದ್ರ ಬಿಜೆಪಿ ಕ್ರಮಕೈಗೊಳ್ಳುತ್ತದೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಯತ್ನಾಳ್ ರವರ ಕುರಿತು ಕೇಂದ್ರದ ಶಿಸ್ತು ಸಮಿತಿಗೆ ತಿಳಿಸಿರುವುದಾಗಿ ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ ಕುಮಾರ್ ಕಟೀಲ್ ರವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.