ಶಿವಮೊಗ್ಗ: ನಿನ್ನೆ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ಪ್ರಕರಣದ ಕುರಿತು ತನಿಖೆ ನಡೆಸಲು ಶಿವಮೊಗ್ಗ ಉಪವಿಭಾಧಿಕಾರಿ ಪ್ರಕಾಶ್ ಅವರ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿಯು ಆದಷ್ಟು ಬೇಗ ವರದಿ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಇಂದು ಶಿವಮೊಗ್ಗದ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಈಶ್ವರಪ್ಪ ಅವರು ಮಕ್ಕಳ ಹಾಗೂ ಅವರ ತಾಯಿಯಂದಿರ ಆರೋಗ್ಯವನ್ನು ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಜಿ ಆಸ್ಪತ್ರೆಯ ವೈದ್ಯ ಧನಂಜಯ್ ಸರ್ಜಿ ಅವರು ಮಕ್ಕಳಿಗೆ ಒಳ್ಳೆಯ ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು.
ಮಕ್ಕಳ ಚಿಕಿತ್ಸೆಗೆ ತಗಲುವ ಖರ್ಚನ್ನು ಜಿಲ್ಲಾಡಳಿತ ಭರಿಸಲಿದೆ ಎಂದು ಭರವಸೆ ನೀಡಿದ ಅವರು, ಬೆಂಕಿ ಬಿದ್ದ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ಅವರ ಬಗ್ಗೆ ಸರ್ಕಾರ ಕಠಿಣ ಕ್ರಮ ತೆಗೆದು ಕೊಳ್ಳಲಿದೆ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.