ಶಿವಮೊಗ್ಗ: ಸಮಾಜವಾದಿ ಹೋರಾಟಗಾರ, ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಾಗರದಲ್ಲಿದ್ದಾಗ ಸಣ್ಣ ಜ್ವರ ಕಾಣಿಸಿಕೊಂಡಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬೆಂಗಳೂರಿಗೆ ತೆರಳಿದ ನಂತರ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಸದ್ಯ ಕಾಗೋಡು ತಿಮ್ಮಪ್ಪ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಕೆ ಕಾಣುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.