ಶಿವಮೊಗ್ಗ: ಕನ್ನಡಿಗರಿಗೆ ಉದ್ಯೋಗ ಅವಕಾಶ ನೀಡುವ ನಿಟ್ಟಿನಲ್ಲಿ ಕರ್ನಾಟಕ ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ನಡೆಯುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ಕನ್ನಡದ ಬಗ್ಗೆ, ರೈತರ ಬಗ್ಗೆ ನಿರ್ಲಕ್ಷ್ಯ ತೋರುತ್ತಿವೆ. ಕನ್ನಡಿಗರಿಗೆ ಕರ್ನಾಟಕದಲ್ಲಿಯೇ ಉದ್ಯೋಗಾವಕಾಶಗಳು ಸಿಗುವ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ನಡೆಯುತ್ತಿದೆ. ಹಾಗಾಗಿ ಸಂಘಟನೆಯನ್ನು ತಾಲೂಕು ಮಟ್ಟದಿಂದ ಗಟ್ಟಿಗೊಳಿಸಲಾಗುತ್ತಿದೆ. ಸಂಘಟನೆಯ ರಾಜ್ಯ ಸಮಿತಿಯ ಪದಾಧಿಕಾರಿಗಳ ಪುನರ್ರಚನೆ ಮಾಡಲಾಗುತ್ತಿದೆ ಎಂದರು.
ಈಗಾಗಲೇ ಸಂಘಟನೆಗೆ 20 ಸಾವಿರ ಸದಸ್ಯರು ಸದಸ್ಯತ್ವ ಪಡೆದಿದ್ದು, ಸಂಘಟನೆಯನ್ನು ಮತ್ತಷ್ಟು ಬಲಗೊಳಿಸಲಾಗ್ತಿದೆ. ರಾಜಕೀಯ ಶಕ್ತಿಯಿಲ್ಲದೇ ಯಾವುದೇ ಹಕ್ಕನ್ನು ಪಡೆಯಲು ಆಗುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: ತುಂಗೆಯ ಮಡಿಲಲ್ಲಿ ವಿದೇಶಿ ಅತಿಥಿಗಳ ಕಲರವ ನೋಡಿ..
ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗಾವಕಾಶಗಳು ಸಿಗಬೇಕು ಎನ್ನುವ ನಿಟ್ಟಿನಲ್ಲಿ ಹೋರಾಟ ನಡೆಯುತ್ತಿದೆ. ನಾನು ಕಳೆದ 9 ವರ್ಷಗಳಿಂದ ಸಂಘಟನೆಯ ರಾಜ್ಯಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಹಾಗಾಗಿ ಹೊಸಬರಿಗೆ ಅವಕಾಶಗಳು ಸಿಗಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯ ಸಮಿತಿ ಪುನರ್ ರಚನೆ ಆಗುತ್ತಿದೆ ಎಂದರು.