ETV Bharat / state

ಕಾಂಗ್ರೆಸ್ ವಿರುದ್ಧ ಪ್ರಚಾರ.. ಶಿವಮೊಗ್ಗದಲ್ಲಿ 21 ಜನ ಪದಾಧಿಕಾರಿಗಳ ಉಚ್ಚಾಟನೆ

author img

By

Published : Apr 30, 2023, 9:10 AM IST

Updated : Apr 30, 2023, 10:07 AM IST

ಪಕ್ಷದ ಅಧಿಕೃತ ಅಭ್ಯರ್ಥಿ ಬಿಟ್ಟು ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದ 21 ಪದಾಧಿಕಾರಿಗಳನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

shivamogga
ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದರೇಶ್ ಸುದ್ದಿಗೋಷ್ಠಿ
ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದರೇಶ್ ಮಾಧ್ಯಮಗೋಷ್ಟಿ ..

ಶಿವಮೊಗ್ಗ: ಜಿಲ್ಲೆಯ ಸಾಗರ ಮತ್ತು ಶಿಕಾರಿಪುರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡುತ್ತಿದ್ದ ಪಕ್ಷದ 21 ಮಂದಿ ಕಾರ್ಯಕರ್ತರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್. ಎಸ್ ಸುಂದರೇಶ್ ತಿಳಿಸಿದರು. ಶನಿವಾರ ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ಬಿಟ್ಟು ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ ಮಾಡಿದ 21 ಪದಾಧಿಕಾರಿಗಳನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಮುಖವಾಗಿ ಶಿಕಾರಿಪುರದ ಎಸ್.ಸಿ ವೀರೇಶ್, ಉಮೇಶ್, ರಾಘವೇಂದ್ರ ನಾಯ್ಕ್ ಹಾಗೂ ಸಾಗರದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ. ರಾಜನಂದಿನಿ, ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಹುನಗೋಡು ರತ್ನಾಕರ್ ಮುಂತಾದವರಿದ್ದಾರೆ. ಜತೆಗೆ ಶಿಕಾರಿಪುರದಲ್ಲಿ ಸ್ವತಂತ್ರ ಅಭ್ಯರ್ಥಿ ನಾಗರಾಜ ಗೌಡ ಅವರನ್ನು ಉಚ್ಚಾಟಿಸಲು ಈಗಾಗಲೇ ರಾಜ್ಯ ಸಮಿತಿಗೆ ಶಿಫಾರಸು ಮಾಡಲಾಗಿದೆ ಎಂದರು.

ಮೇ 2ರಂದು ತೀರ್ಥಹಳ್ಳಿಗೆ ರಾಹುಲ್ ಗಾಂಧಿ ಭೇಟಿ: ನಗರದಲ್ಲಿ ಕಾಂಗ್ರೆಸ್- ಬಿಜೆಪಿ ಹಾಗೂ ಗ್ರಾಮಾಂತರದಲ್ಲಿ ಕಾಂಗ್ರೆಸ್- ಜೆಡಿಎಸ್‌ಗೂ ನೇರ ಸ್ಪರ್ಧೆ ಇರುತ್ತದೆ. ಜಿಲ್ಲೆಯ ಎಲ್ಲಾ 7 ಕ್ಷೇತ್ರಗಳಲ್ಲೂ ಕಾಂಗ್ರೆಸ್​ ಜಯಭೇರಿ ಬಾರಿಸಲಿದೆ ಎಂದು ಸುಂದರೇಶ್ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಭ್ಯರ್ಥಿಗಳು ಈಗಾಗಲೇ ಪ್ರಚಾರ ಮುಂದುವರೆಸಿದ್ದು, ಪಕ್ಷದ ಪರ ಅಲೆ ಕಾಣುತ್ತಿದೆ. ಪಕ್ಷ ಬಿಟ್ಟು ಹೋದವರಿದಂದ ಯಾವ ಪರಿಣಾಮ ಆಗುವುದಿಲ್ಲ. ರಾಜ್ಯ ಮತ್ತು ಕೇಂದ್ರ ನಾಯಕರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಮೇ 2ಕ್ಕೆ ರಾಹುಲ್ ಗಾಂಧಿ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಶಿವಮೊಗ್ಗಕ್ಕೆ ಇಂದು ಖರ್ಗೆ ಭೇಟಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರು ಇಂದು(ಏ.30) ಬೆಳಗ್ಗೆ 10 ಗಂಟೆಗೆ ಹಾಸನದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ. ನಗರದಲ್ಲಿ 10-30ಕ್ಕೆ ಮಾಧ್ಯಮಗೋಷ್ಟಿ ಇದ್ದು, 11-30ಕ್ಕೆ ಡಿವಿಎಸ್ ಕಂಪೋಸಿಟ್ ಕಾಲೇಜಿನ ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ. ನಂತರ ಅವರು ಸೊರಬಕ್ಕೆ ತೆರಳುವರು ಎಂದು ಸುಂದರೇಶ ಮಾಹಿತಿ ನೀಡಿದ್ರು.

ಸೊರಬದಲ್ಲಿ ಗೀತಾ ಶಿವರಾಜ್‌ಕುಮಾರ್ ರೋಡ್​​ ಶೋ: ಬಳಿಕ ಮಾತನಾಡಿದ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್, ಸೊರಬ ತಾಲೂಕು ಆನವಟ್ಟಿಯಲ್ಲಿ ಏ.30(ಇಂದು) ರಂದು ಮಧ್ಯಾಹ್ನ 12 ಗಂಟೆಗೆ ನಟ ಶಿವರಾಜ್‌ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರ ರೋಡ್ ಶೋ ಆಯೋಜಿಸಲಾಗಿದೆ. ಗೀತಾ ಶಿವರಾಜ್‌ಕುಮಾರ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಅಭ್ಯರ್ಥಿ ಮಧು ಬಂಗಾರಪ್ಪ ಅವರೂ ಸೇರಿದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ತಮ್ಮ ಪತಿ ಶಿವರಾಜ್‌ಕುಮಾರ್ ಅವರೊಂದಿಗೆ ರೋಡ್‌ಶೋನಲ್ಲಿ ಭಾಗವಹಿಸಲಿದ್ದಾರೆ. ಈ ರೋಡ್ ಶೋ ಸುಮಾರು 2 ಕಿ.ಮೀ. ಇರಲಿದೆ. ಮಧ್ಯಾಹ್ನ 4 ಗಂಟೆಗೆ ಆನವಟ್ಟಿಯ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಬಹಿರಂಗ ಸಭೆ ಇರುತ್ತದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಕೂಡ ಭಾಗವಹಿಸಲಿದ್ದಾರೆ ಎಂದರು.

ಮಾಧ್ಯಮಗೋಷ್ಟಿಯಲ್ಲಿ ಪ್ರಮುಖರಾದ ಚಂದ್ರಭೂಪಾಲ್, ರವಿಕುಮಾರ್, ಮಧು, ಎಲ್. ಸತ್ಯನಾರಾಯಣ ರಾವ್, ಚಂದ್ರಶೇಖರ್ ಸೇರಿದಂತೆ ಇತರ ಪ್ರಮುಖರು ಹಾಜರಿದ್ದರು.

ಇದನ್ನೂ ಓದಿ: ಗೀತಾ ಕಾಂಗ್ರೆಸ್ ಸೇರ್ಪಡೆ: ಶಿವರಾಜ್​ಕುಮಾರ್ ಕೂಡ ಪ್ರಚಾರಕ್ಕೆ ಬರುತ್ತಾರೆ - ಗೀತಾ ಶಿವರಾಜ್​ಕುಮಾರ್

Last Updated : Apr 30, 2023, 10:07 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.