ಶಿವಮೊಗ್ಗ : ಗ್ರಾಮ ಪಂಚಾಯಿತಿ ನಾಮ ನಿರ್ದೇಶನ ಸದಸ್ಯರನ್ನಾಗಿ ಆಯ್ಕೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯದಲ್ಲಿ ಗ್ರಾಮ ಪಂಚಾಯಿತಿಯ 5 ವರ್ಷಗಳ ಅವಧಿ ಮುಕ್ತಾಯವಾಗಿದ್ದು, ಕಾರಣಾಂತರಗಳಿಂದ ಚುನಾವಣೆ ಮುಂದೂಡಲ್ಪಟ್ಟಿದೆ. ಆದರೆ, ರಾಜ್ಯ ಸರ್ಕಾರವು ಅವೈಜ್ಞಾನಿಕ ಹಾಗೂ ಸಂವಿಧಾನ ಬಾಹಿರವಾಗಿ ಗ್ರಾಮ ಪಂಚಾಯಿತಿಯ ಅಧಿಕಾರವನ್ನು ಮುಂದುವರೆಸಲು ನಾಮ ನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಹೊರಟಿರುವ ಕ್ರಮ ಸರಿಯಿಲ್ಲ ಎಂದು ಆರೋಪಿಸಿದರು.
ಹಾಗಾಗಿ ಮೊದಲು ಆಯ್ಕೆಯಾದ ಚುನಾಯಿತ ಸದಸ್ಯರನ್ನೇ ಮುಂದುವರಿಸಬೇಕು, ಇಲ್ಲವಾದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹೆಚ್ಚಿನ ಅಧಿಕಾರ ನೀಡುವ ಮೂಲಕ ಪಂಚಾಯತ್ ರಾಜ್ ಕಾಯ್ದೆ ಯನ್ನು ಗೌರವಿಸಬೇಕು. ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕು.
ಹಾಗೆಯೇ ಈ ಅವೈಜ್ಞಾನಿಕ ಕ್ರಮ ಕೈ ಬಿಡಬೇಕು ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಿದರು.