ETV Bharat / state

ಸದಾಶಿವ ಆಯೋಗದ ಬಹಿರಂಗ ಚರ್ಚೆಗೆ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘ ಒತ್ತಾಯ..! - student union forced to open discussion about sadashiva report

ನ್ಯಾ.ಎ.ಜೆ ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆ ಇಲ್ಲದೇ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದು ಎಂದು ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಒತ್ತಾಯಿಸಲಾಯಿತು.

Karnataka State Banjara Student Association demanding open discussion of Sadashiva Commission
ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘ
author img

By

Published : Sep 19, 2020, 7:33 PM IST

ಶಿವಮೊಗ್ಗ: ನ್ಯಾ.ಎ.ಜೆ ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡದೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಒತ್ತಾಯಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಸಂಘ, ನ್ಯಾ. ಎ.ಜೆ ಸದಾಶಿವ ವರದಿಯಿಂದ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಸಮುದಾಯಗಳಲ್ಲಿ ಪರಸ್ಪರ ದ್ವೇಷ ಹುಟ್ಟುತ್ತದೆ. ಹಾಗಾಗಿ ಆಯೋಗದ ವರದಿಯ ಬಹಿರಂಗ ಚರ್ಚೆ ಇಲ್ಲದೇ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು, ಅದನ್ನು ಸಾರ್ವಜನಿಕ ಚರ್ಚೆಗೆ ಬಿಡಬೇಕು ಎಂದರು.

ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘ

ಪರಿಶಿಷ್ಟ ಜಾತಿಯ 101 ಸಮುದಾಯಗಳಿಗೆ ಮತ್ತು ಆಸಕ್ತರಿಗೆ ಇದರ ದೃಢೀಕೃತ ಪ್ರತಿಯನ್ನು ನೀಡಬೇಕು. ತಕರಾರು, ಆಕ್ಷೇಪಣೆ ಸೂಚಿಸಲು ಕಾಲಾವಕಾಶ ನೀಡಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳಕ್ಕಾಗಿ ಶಿಫಾರಸು ಮಾಡಿರುವ ನ್ಯಾ. ನಾಗಮೋಹನದಾಸ್ ಅವರ ವರದಿಯನ್ನು ಪ್ರಕಟಿಸಬೇಕು ಹಾಗೂ ರಾಜ್ಯದ ಎಲ್ಲ ಜಾತಿ ಜನಾಂಗ ಬುಡಕಟ್ಟುಗಳ ವಾಸ್ತವ ಸ್ಥಿತಿಗತಿಗಳನ್ನು ಅರಿಯುವಂತಾಗಲು ಹಿಂದಿನ ಸರ್ಕಾರ ಕೈಗೊಂಡಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.