ಶಿವಮೊಗ್ಗ: ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ಧ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹೆಚ್ ಆರ್ ಕೇಶವಮೂರ್ತಿ(88) ಅವರ ಅಂತ್ಯಕ್ರಿಯೆ ಗುರುವಾರ ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ಸರ್ಕಾರಿ ಗೌರವದೊಂದಿಗೆ ಅಂತಿಮ ಕ್ರಿಯೆ ನಡೆಸಲು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಕುಮಾರ್ ಆದೇಶಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಸೇರಿದಂತೆ ಇತರ ಗಣ್ಯರು ಪಾರ್ಥೀವ ಶರೀರಕ್ಕೆ ಪುಷ್ಪಮಾಲೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತ ಗಮಕ ಗಾಯಕ ಹೊಸಹಳ್ಳಿ ಕೇಶವಮೂರ್ತಿ ವಿಧಿವಶ
ನಂತರ ಶಿಷ್ಟಾಚಾರದಂತೆ ಪೊಲೀಸ್ ಗೌರವದೊಂದಿಗೆ ಕುಶಾಲತೋಪು ಹಾರಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಮೃತರ ಪತ್ನಿ, ಪುತ್ರಿ, ಬಂಧುಗಳು, ವಿಪ್ರ ಸಮಾಜದ ಮುಖಂಡರು, ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಪಾಲ್ಗೊಂಡಿದ್ದರು.