ETV Bharat / state

ಕೋಣಂದೂರು ಗ್ರಾಪಂ ಅಧ್ಯಕ್ಷೆ ಮೇಲೆ ಹಲ್ಲೆ ಆರೋಪ: ಕಿಮ್ಮನೆ ನೇತೃತ್ವದಲ್ಲಿ ಪ್ರತಿಭಟನೆ - konanduru gram panchayath

ಕೋಣಂದೂರಿನ ಗ್ರಾಮ ಪಂಚಾಯತಿ ಅಧ್ಯಕ್ಷೆ ಕಾಂಗ್ರೆಸ್​ನವರಾಗಿದ್ದು, ಅವರ ಮೇಲೆ ಬಿಜೆಪಿಯ ಪೂರ್ಣೇಶ್ ಎಂಬವರು ಪಂಚಾಯತಿ ಕಚೇರಿಯಲ್ಲಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು.

shimogga
ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
author img

By

Published : Dec 11, 2019, 10:20 AM IST

ಶಿವಮೊಗ್ಗ: ಕೋಣಂದೂರು ಗ್ರಾಮ ಪಂಚಾಯತಿ ಅಧ್ಯಕ್ಷೆಯ ಮೇಲೆ ಗ್ರಾಮ ಪಂಚಾಯಿತಿಯ ಬಿಜೆಪಿ ಸದಸ್ಯ ಕೆ.ಸಿ.ಪೂರ್ಣೇಶ್ ಎಂಬವರು ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ತೀರ್ಥಹಳ್ಳಿಯಲ್ಲಿ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ತೀರ್ಥಹಳ್ಳಿಯಲ್ಲಿ ಪ್ರತಿಭಟನೆ

ತೀರ್ಥಹಳ್ಳಿ ತಾಲೂಕು ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ತಾಲೂಕು ಕಚೇರಿಗೆ ತಲುಪಿತು. ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೋಣಂದೂರಿನ ಗ್ರಾಮ ಪಂಚಾಯತಿ ಅಧ್ಯಕ್ಷೆ ಕಾಂಗ್ರೆಸ್​ನವರಾಗಿದ್ದು, ಅವರ ಮೇಲೆ ಬಿಜೆಪಿಯ ಪೂರ್ಣೇಶ್ ಪಂಚಾಯತಿ ಕಚೇರಿಯಲ್ಲಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿದರೂ ಪೊಲೀಸರು ಯಾವುದೇ ಕ್ರಮ ತೆಗೆದು ಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತೀರ್ಥಹಳ್ಳಿ ತಾಲೂಕು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯವರು ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ. ಬಿಜೆಪಿಯವರ ತಾಳಕ್ಕೆ ತಕ್ಕಂತೆ ಪೊಲೀಸರು ಕುಣಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಯಿತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿಯ ಶಾಸಕರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರು ತಕ್ಷಣ ಕೋಣಂದೂರು ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯ ಪೂರ್ಣೇಶ್ ಅವರನ್ನು ಬಂಧಿಸಿ‌ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Intro:ಮಹಿಳಾ ಗ್ರಾಂ.ಪಂಚಾಯತ್ ಅಧ್ಯಕ್ಷೆ ಮೇಲೆ ಹಲ್ಲೆ ಆರೋಪ: ಕಿಮ್ಮನೆ ನೇತೃತ್ವದಲ್ಲಿ ಪ್ರತಿಭಟನೆ.

ಶಿವಮೊಗ್ಗ: ಕೋಣಂದೂರು ಗ್ರಾಮ ಪಂಚಾಯತ್ ಮಹಿಳಾ ಅಧ್ಯಕ್ಷೆಯ ಮೇಲೆ ಬಿಜೆಪಿಯ ಗ್ರಾಮ ಪಂಚಾಯತ್ ಸದಸ್ಯ ಕೆ.ಸಿ.ಪೂರ್ಣೇಶ್ ರವರು ಹಲ್ಲೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ತೀರ್ಥಹಳ್ಳಿಯಲ್ಲಿ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ತೀರ್ಥಹಳ್ಳಿ ತಾಲೂಕು ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನ ಮೆರವಣಿಗೆ ಪ್ರಾರಂಭಿಸಿ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತ್ರ ತಾಲೂಕು ಕಚೇರಿಗೆ ತಲುಪಿತು. ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಆರಗ ಜ್ಞಾನೇಂದ್ರ ರವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕೋಣಂದೂರಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಾಂಗ್ರೆಸ್ ನವರಾಗಿದ್ದು, ಅವರ ಮೇಲೆ ಬಿಜೆಪಿಯ ಪೂರ್ಣೇಶ್ ರವರು ಪಂಚಾಯತ್ ಕಚೇರಿಯಲ್ಲಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿದರು ಪೊಲೀಸರು ಯಾವುದೇ ಕ್ರಮ ತೆಗೆದು ಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. Body:ಕೋಣಂದೂರಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಾಂಗ್ರೆಸ್ ನವರಾಗಿದ್ದು, ಅವರ ಮೇಲೆ ಬಿಜೆಪಿಯ ಪೂರ್ಣೇಶ್ ರವರು ಪಂಚಾಯತ್ ಕಚೇರಿಯಲ್ಲಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿದರು ಪೊಲೀಸರು ಯಾವುದೇ ಕ್ರಮ ತೆಗೆದು ಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. Conclusion:ತೀರ್ಥಹಳ್ಳಿ ತಾಲೂಕು ವಿಧಾನಸಭ ಕ್ಷೇತ್ರದಲ್ಲಿ ಬಿಜೆಪಿಯವರು ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ. ಬಿಜೆಪಿಯವರ ತಾಳಕ್ಕೆ ತಕ್ಕಂತೆ ಪೊಲೀಸರು ಕುಣಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯಲ್ಲಿ ಕಿಮ್ಮನೆ ರತ್ನಾಕರ್ ರವರು ಮಾತನಾಡಿ ಕ್ಷೇತ್ರದಲ್ಲಿ ಬಿಜೆಪಿಯ ಶಾಸಕರು ದ್ವೇಣದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ತಕ್ಷಣ ಬಿಜೆಪಿಯ ಗ್ರಾಮ ಪಂಚಾಯತ್ ಸದಸ್ಯ ಪೂರ್ಣೇಶರನ್ನು ಬಂಧಿಸಿ‌ ಕಾನೂನು ಪ್ರಕಾರ ಕ್ರಮ ತೆಗೆದು ಕೊಳ್ಳಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.