ಶಿವಮೊಗ್ಗ: ಕೇಂದ್ರ ಸರ್ಕಾರ ಪ್ರತಿದಿನ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ, ತೀರ್ಥಹಳ್ಳಿ ಬ್ಲಾಕ್ ಕಾಂಗ್ರೆಸ್ ಸೈಕಲ್ ಜಾಥಾ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿತು.
ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುವ ಮೂಲಕ ಸೈಕಲ್ ಜಾಥಾ ನಡೆಸಲಾಯಿತು. ತೀರ್ಥಹಳ್ಳಿಯ ಬಾಳೆಬೈಲಿನಿಂದ ಪ್ರಾರಂಭವಾದ ಸೈಕಲ್ ಜಾಥಾ ಆಗುಂಬೆ ರಸ್ತೆಯ ಮೂಲಕ ತೀರ್ಥಹಳ್ಳಿ ತಾಲೂಕು ಕಚೇರಿ ತಲುಪಿತು.
ಸುರಿಯುವ ಮಳೆಯನ್ನು ಲೆಕ್ಕಿಸದೆ ಕಾಂಗ್ರೆಸ್ ಕಾರ್ಯಕರ್ತರು ಜಾಥಾದಲ್ಲಿ ಭಾಗಿಯಾದರು. ಇದರಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕೂಡ ಭಾಗಿಯಾಗಿದ್ದರು. ಕೊರೊನಾದಿಂದ ವಿಶ್ವವೇ ತತ್ತರಿಸಿ ಹೋಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿತ ಕಂಡಿದೆ. ಆದರೂ ನಮ್ಮಲ್ಲಿ ಡಿಸೇಲ್-ಪೆಟ್ರೋಲ್ಗೆ ಪೈಪೋಟಿ ನೀಡುತ್ತಾ ಸಾಗಿದೆ. ತಕ್ಷಣವೇ ತೈಲ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದ ಅವರು, ಕೇಂದ್ರದ ನಿರ್ಧಾರಕ್ಕೆ ಆಕ್ರೋಶ ಹೊರಹಾಕಿದರು. ಈ ವೇಳೆ ಜಿ.ಪಂ ಸದಸ್ಯ ಕಲಗೋಡು ರತ್ನಾಕರ್ ಸೇರಿ ಇತರರು ಹಾಜರಿದ್ದರು.