ಶಿವಮೊಗ್ಗ: ನಗರದ ಅಮೀರ್ ಅಹಮದ್ ವೃತ್ತದಲ್ಲಿ ಇರಿಸಲಾಗಿದ್ದ ವೀರ ಸಾವರ್ಕರ್ ಫ್ಲೆಕ್ಸ್ ತೆರವು ಮಾಡಿದ ಘಟನೆ ನಡೆದ ಬೆನ್ನಲ್ಲೇ ಯುವಕನಿಗೆ ಚಾಕು ಇರಿಯಲಾಗಿದೆ. ನಗರದ ಗಾಂಧಿಬಜಾರ್ನಲ್ಲಿ ಈ ಪ್ರಕರಣ ನಡೆದಿದೆ.
ಅಮೀರ್ ಅಹಮದ್ ವೃತ್ತದಲ್ಲಿ ಇರಿಸಲಾಗಿದ್ದ ವೀರ ಸಾವರ್ಕರ್ ಫ್ಲೆಕ್ಸ್ ಅನ್ನು ತೆರವು ಮಾಡಿದ ಬೆನ್ನಲ್ಲೇ ಕೆಲಕಾಲ ಗಲಾಟೆ ನಡೆದಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಆದರೆ ಬಳಿಕ ಕೆಲ ಗಂಟೆಯಲ್ಲೇ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿರುವ ಪ್ರಕರಣ ನಡೆದಿದೆ. ಗಾಂಧಿ ಬಜಾರ್ನಲ್ಲಿದ್ದ ಪ್ರೇಮ್ ಸಿಂಗ್(20) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಗೊಂಡ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫ್ಲೆಕ್ಸ್ ತೆರವು ವಿಚಾರ ಸಂಬಂಧ 10 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಶಿವಮೊಗ್ಗ ನಗರದಾದ್ಯಂತ ಆಗಸ್ಟ್ 18ರ ತನಕ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ತೆರವು, ಗಲಾಟೆ: 144 ಸೆಕ್ಷನ್ ಜಾರಿ