ETV Bharat / state

ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಕಾಯ್ದೆಗಳ ಅರಿವು ಮುಖ್ಯ: ಜಿಪಂ ಸಿಇಒ

ಶಿವಮೊಗ್ಗದಲ್ಲಿ ಪಂಚಾಯತ್​​ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗೆ “ಮಕ್ಕಳ ರಕ್ಷಣಾ ಕಾರ್ಯ ವಿಧಾನಗಳ” ಕುರಿತು 2 ದಿನ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

author img

By

Published : Nov 27, 2019, 5:09 PM IST

children
ಮಕ್ಕಳ ರಕ್ಷಣಾ ಕಾರ್ಯವಿಧಾನಗಳ ಕಾರ್ಯಗಾರ

ಶಿವಮೊಗ್ಗ: ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಮೊದಲು ಕಾಯ್ದೆಗಳ ಅರಿವು ಮುಖ್ಯ ಎಂದು ಜಿಪಂ ಸಿಇಒ ಎಂ.ಎಲ್.ವೈಶಾಲಿ ಹೇಳಿದರು.

ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯಗಳು ಇತ್ತೀಚೆಗೆ ಹೆಚ್ಚುತ್ತಿವೆ. ಅಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಮೊದಲು ಸಂತ್ರಸ್ತ ಮಕ್ಕಳ ರಕ್ಷಣೆಗಿರುವ ಕಾಯ್ದೆಗಳ ಬಗ್ಗೆ ಅರಿವು ಮೂಡಿಸುವುದು ಮುಖ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಎಂ.ಎಲ್. ವೈಶಾಲಿ ಹೇಳಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬಾಲನ್ಯಾಯ ಮಂಡಳಿ ಸಭಾಂಗಣದಲ್ಲಿ ಗ್ರಾಪಂ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು / ಕಾರ್ಯದರ್ಶಿಗಳಿಗೆ “ಮಕ್ಕಳ ರಕ್ಷಣಾ ಕಾರ್ಯ ವಿಧಾನಗಳ” ಕುರಿತು 2 ದಿನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ 78 ಕೇಸ್‍ಗಳು ಬೆಳಕಿಗೆ ಬಂದಿವೆ. ಆದರೆ ಮಕ್ಕಳ ಮೇಲೆ ನಡೆಯುವ ಎಷ್ಟೋ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುವುದಿಲ್ಲ. ಅವುಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಗ್ರಾಮಸಭೆ ಮಾಡುವ ಮೂಲಕ ಪೋಕ್ಸೋ ಕಾಯ್ದೆ-2012, ಬಾಲ ನ್ಯಾಯ ಕಾಯ್ದೆ-2000, ಬಾಲ್ಯ ವಿವಾಹ ಕಾಯ್ದೆ-2006 ಇವುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆ ಇಂತಹ ಕೃತ್ಯಗಳ ನಿರ್ಮೂಲನೆಗೆ ಮುಂದಾಗಬೇಕಿದೆ ಎಂದರು.

Intro:ಶಿವಮೊಗ್ಗ,

ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಮೊದಲು ಕಾಯ್ದೆಗಳ ಅರಿವು ಮುಖ್ಯ- ಎಂ.ಎಲ್. ವೈಶಾಲಿ

ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯಗಳು ಇತ್ತೀಚೆಗೆ ಹೆಚ್ಚುತ್ತಿವೆ. ಅಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಮೊದಲು ಸಂತ್ರಸ್ತ ಮಕ್ಕಳ ರಕ್ಷಣೆಗಿರುವ ಕಾಯ್ದೆಗಳ ಅರಿವು ಮೂಡಿಸುವುದು ಮುಖ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಎಂ.ಎಲ್. ವೈಶಾಲಿ ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬಾಲನ್ಯಾಯ ಮಂಡಳಿ ಸಭಾಂಗಣದಲ್ಲಿ ಗ್ರಾ.ಪಂ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು / ಕಾರ್ಯದರ್ಶಿಗಳಿಗೆ “ಮಕ್ಕಳ ರಕ್ಷಣಾ ಕಾರ್ಯವಿಧಾನಗಳ” ಕುರಿತು 2 ದಿನ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಜಿಲ್ಲೆಯಲ್ಲಿ ಪೋಕ್ಸ್ ಕಾಯ್ದೆ ಅಡಿಯಲ್ಲಿ 78 ಕೇಸ್‍ಗಳು ಬೆಳಕಿಗೆ ಬಂದಿವೆ. ಆದರೆ ಮಕ್ಕಳ ಮೇಲೆ ನಡೆಯುವ ಎಷ್ಟೋ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುವುದಿಲ್ಲ್ಲ. ಅವುಗಳು ಬೆಳಕಿಗೆ ತರುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಗ್ರಾಮಸಭೆ ಮಾಡುವ ಮೂಲಕ ಪೋಕ್ಸೋ ಕಾಯ್ದೆ-2012, ಬಾಲ ನ್ಯಾಯ ಕಾಯ್ದೆ-2000, ಬಾಲ್ಯ ವಿವಾಹ ಕಾಯ್ದೆ-2006, ಇವುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆ ಇಂತಹ ಕೃತ್ಯಗಳ ನಿರ್ಮೂಲನೆಗೆ ಮುಂದಾಗಬೇಕಿದೆ ಎಂದು ಅವರು ತಿಳಿಸಿದರು.
ಮಕ್ಕಳ ರಕ್ಷಣೆಗಾಗಿ ಹಲವು ಕಾಯ್ದೆಗಳಿವೆ. ಎತಂಹ ಕಠಿಣ ಕಾಯ್ದೆಗಳಿದ್ದರೂ ಕೂಡ ತಂದೆಯೇ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗುವುದು, ಶಾಲೆಗಳಲ್ಲಿ ಮಕ್ಕಳ ಮೇಲೆ ಶಿಕ್ಷಕರಿಂದಾಗುತ್ತಿರುವ ದೌರ್ಜನ್ಯ, ಅಸಭ್ಯ ನಡವಳಿಕೆ ಹೆಚ್ಚಾಗುತ್ತಿವೆ. ಈ ರೀತಿಯ ಕಾರಣಗಳಿಂದಾಗಿ ಎಷ್ಟೋ ಮಕ್ಕಳು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಮಹಿಳೆಯರಿಗೆ ಮಕ್ಕಳಿಗೆ ನಾವು ದೈರ್ಯ ತುಂಬುವ ಕಾರ್ಯನಿರ್ವಹಿಸೋಣ ಎಂದು ಅವರು ಶಿಬಿರಾರ್ಥಿಗಳನ್ನು ಪ್ರೇರೆಪಿಸಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕೆ.ಎಸ್. ಸರಸ್ವತಿ ಮಾತನಾಡಿ ಕಾನೂನನ್ನು ಗೌರವಿಸುವ, ಪಾಲಿಸುವ ಧೋರಣೆ ಬೆಳೆಸಿಕೊಳ್ಳಬೇಕು. ಗ್ರಾಮಗಳ ಮಹಿಳೆಯರಿಗೆ, ಮಕ್ಕಳಿಗೆ ಹಾಗೂ ಕಾನೂನು ಅರಿವಿನ ಕೊರತೆ ಇರುವವರಲ್ಲಿ ಕಾನೂನು ತಿಳಿವಳಿಕೆ ಮೂಡಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ಪೋಕ್ಸೋ ಕಾಯ್ದೆ ಅಡಿಯಲ್ಲಿರುವ ಪ್ರಕರಣಗಳಲ್ಲಿ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಜಿಲ್ಲೆಯು ಮೊದಲ ಸ್ಥಾನದಲ್ಲಿದ್ದು, ಇನ್ನೂ ಇತ್ಯಾರ್ಥವಾಗದ ಪ್ರಕರಣಗಳು 250 ಇವೆ. ಹಲವು ಕಾಯ್ದೆಗಳು ಜಾರಿಯಲ್ಲಿದ್ದು, ಪ್ರಕರಣಗಳು ಕಡಿಮೆ ಆಗುತ್ತಿವೆ ಎಂಬುದಕ್ಕಿಂತ ಪ್ರಕರಣಗಳು ಹೆಚ್ಚು ನಡೆಯುತ್ತಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಪ್ರಸುತ್ತ ದಿನಗಳಲ್ಲಿ ಕುಟುಂಬಗಳಲ್ಲಿಯ ಲೈಂಗಿಕ ದೌರ್ಜನ್ಯ ಒಂದು ಕಡೇಯಾದರೆ, ಗಂಡು ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ನಡೆಯುತ್ತಿವೆ. ಮನುಷ್ಯ ತನ್ನ ಮನುಷ್ಯತ್ವ ಕಳೆದುಕೊಂಡು ಈ ರೀತಿಯ ಚಟುವಟಿಕೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವುದು ಬೇಸರದ ಸಂಗತಿ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಿ.ಎಂ.ರೇಖಾ, ಪೋಲಿಸ್ ಅಧಿಕಾರಿ ಸೋಮಶೇಖರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕ ಆರ್. ಶೇಷಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.