ETV Bharat / state

ಕೃಷಿ ಕಾಯಿದೆ ವಾಪಸ್ ಪಡೆಯದಿದ್ದರೆ ಬಿಜೆಪಿ ಸ್ಥಾನಕ್ಕೆ ಕಾಂಗ್ರೆಸ್​ನ್ನು ಕಳುಹಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ - ಶಿವಮೊಗ್ಗ ನ್ಯೂಸ್​

ರಾಜ್ಯ ಸರ್ಕಾರ ರೈತ ವಿರೋಧಿ ಕಾಯಿದೆಗಳಾದ ಕೃಷಿ, ಭೂ ಸುಧಾರಣಾ ಕಾಯಿದೆ ಹಾಗೂ ಎಪಿಎಂಸಿ ಕಾಯಿದೆ ಜತೆಗೆ ಗೋಹತ್ಯೆ‌ ನಿಷೇಧ ಕಾಯಿದೆಯನ್ನು ವಾಪಸ್ ಪಡೆಯದೆ ಹೋದರೆ ಹೋದರೆ ಈಗ ಬಿಜೆಪಿಗೆ ಆದ ಗತಿ ಕಾಂಗ್ರೆಸ್​ಗೂ ಆಗಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.

Kodihalli Chandrashekar
ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್
author img

By

Published : Jul 19, 2023, 3:19 PM IST

ರಾಜ್ಯ ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ..

ಶಿವಮೊಗ್ಗ: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಕೃಷಿ ಕಾಯಿದೆಯನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯದೆ ಹೋದರೆ ಬಿಜೆಪಿಯ ಸ್ಥಾನಕ್ಕೆ ಕಾಂಗ್ರೆಸ್​​ನ್ನು ಕಳುಹಿಸುತ್ತೇವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ‌ ರವಾನಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದವರು ಕೃಷಿ ಕಾಯಿದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದರು. ಕೃಷಿ ಕಾಯ್ದೆ ಸೇರಿದಂತೆ ಇತರೆ 4 ಕಾಯಿದೆ ಜಾರಿಗೆ ತರುವಾಗ ಅಂದಿನ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರಿಗೆ ನಾನು ಈ ಕಾಯಿದೆ ಜಾರಿ ಮಾಡುತ್ತೇನೆ ಎಂದು ಕೇಳಿದ್ದರೇನು?. ಕಾಯಿದೆ ವಾಪಸ್ ಪಡೆಯಲು ಕರ್ನಾಟಕ ಕಾಂಗ್ರೆಸ್ ಪಕ್ಷ ಧಮ್ ತೋರಬೇಕಿತ್ತು. ನಾವು ಹೇಳಿದ್ದನ್ನು ಮಾಡುತ್ತೇವೆ ಎಂಬುದನ್ನು ಕಾಂಗ್ರೆಸ್​ನವರು ತೋರಿಸಬೇಕಿತ್ತು ಎಂದರು.

ವಿರೋಧ ಪಕ್ಷದವರು ಟೀಕೆ ಮಾಡಿದ ತಕ್ಷಣ ರೈತರ ಜೊತೆ ಮಾತನಾಡುತ್ತೇವೆ. ಸಮಾಲೋಚನೆ ಮಾಡುತ್ತೇವೆ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಕೃಷಿ ಕಾಯಿದೆ ಜತೆ ಎಪಿಎಂಸಿ ಕಾಯಿದೆಯನ್ನು ರದ್ದು ಮಾಡುವ ಕುರಿತು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೆನಪು ಮಾಡಿಕೊಟ್ಟಿದ್ದೇನೆ. ಅವರ ಜೊತೆ ನಾವು ಸಾಕಷ್ಟು ವಿಚಾರಗಳನ್ನು ಮಾತನಾಡಿದ್ದೇವೆ. ಅವರು ಎಲ್ಲಾ ರೈತ ವಿರೋಧಿ ಕಾಯಿದೆಗಳನ್ನು ವಾಪಸ್ ತೆಗೆದುಕೊಳ್ಳುವ ಕುರಿತು ನಮಗೆ ಭರವಸೆ ನೀಡಿದ್ದಾರೆ ಎಂದು ಕೋಡಿಹಳ್ಳಿ ತಿಳಿಸಿದರು.

ರಾಜ್ಯ ಸರ್ಕಾರ ರೈತ ವಿರೋಧಿ ಕಾಯಿದೆಗಳಾದ ಕೃಷಿ, ಭೂ ಸುಧಾರಣಾ ಕಾಯಿದೆ ಹಾಗೂ ಎಪಿಎಂಸಿ ಕಾಯಿದೆ ಜತೆಗೆ ಗೋಹತ್ಯೆ‌ ನಿಷೇಧ ಕಾಯಿದೆಯನ್ನು ವಾಪಸ್ ಪಡೆಯುವುದಾಗಿ ನಮಗೆ ಭರವಸೆ ನೀಡಿದೆ. ಒಂದು ವೇಳೆ ಇವರು ಸಹ ಕಾಯಿದೆ ವಾಪಸ್ ಪಡೆಯದೆ ಹೋದರೆ ಹೋದರೆ ಈಗ ಬಿಜೆಪಿಗೆ ಆದ ಗತಿ ಕಾಂಗ್ರೆಸ್​ಗೂ ಆಗಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.

ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ಅಂಗೀಕಾರ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ವಿವಾದಿತ ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ಜು.17ರಂದು ವಿಧಾನಸಭೆಯಲ್ಲಿ ಅಂಗೀಕೃತಗೊಂಡಿತು. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆ ಮಧ್ಯೆ ವಿಧಾನಸಭೆಯಲ್ಲಿ 2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿತ್ತು.

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧೇಯಕವನ್ನು ಮಂಡಿಸಿದರು. ಈ ಬಿಲ್ಅನ್ನು ತರಾತುರಿಯಲ್ಲಿ ತಂದಿಲ್ಲ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಈ ಕಾನೂನು ತಂದಿತ್ತು.‌ ಇದರಿಂದ ರೈತರಿಗೆ ಲಾಭ ಆಗಿಲ್ಲ. ಇದರಿಂದ ರಿಲಯಾನ್ಸ್, ಡಿಮಾರ್ಟ್ ನಂತವರಿಗೆ ಲಾಭ ಆಗಿದೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ‌ಕಾನೂನನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಹೀಗಿದ್ದರೂ, ರಾಜ್ಯದಲ್ಲಿ ಈ ಕಾನೂನು ಹಿಂಪಡೆದಿರಲಿಲ್ಲ. ಕೇಂದ್ರ ವಾಪಸ್ ಪಡೆದರೂ ರಾಜ್ಯ ವಾಪಸ್ ಪಡೆದಿಲ್ಲ.‌ ಇದರಿಂದ ರೈತರಿಗೆ ತೊಂದರೆ ಆಗುತ್ತಿತ್ತು. ಈ ಕಾರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಅವಧಿಯ ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ಅಂಗೀಕಾರ: ಬಿಜೆಪಿ, ಜೆಡಿಎಸ್​ ವಿರೋಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.