ಶಿವಮೊಗ್ಗ: ಕೊರೊನಾಗೆ ಲಸಿಕೆ ಅಭಿವೃದ್ಧಿಪಡಿಸಿದ ನಂತರ ದೇಶಾದ್ಯಂತ ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಅದರಂತೆ ಕಳೆದ ಜ.16 ರಿಂದ ರಾಜ್ಯಾದ್ಯಂತ ಆರೋಗ್ಯ ಇಲಾಖೆಯಿಂದ ಗುರುತಿಸಿದ ವೈದ್ಯರು, ನರ್ಸ್ ಸೇರಿದಂತೆ ಇಲಾಖೆಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಕೋವಿಡ್ ವ್ಯಾಕ್ಸಿನ್ ನೀಡಲಾಗಿತ್ತು.
ಇದೀಗ 2ನೇ ಹಂತದಲ್ಲಿ ಮುಂಚೂಣಿ ಕೊರೊನಾ ವಾರಿಯರ್ಸ್ಗೆ ಕೋವಿಡ್ ವ್ಯಾಕ್ಸಿನ್ ನೀಡಲು ಆರಂಭಿಸಲಾಗಿತ್ತು. ಅದರಂತೆ ಮೊದಲ ಹಂತದಲ್ಲಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗೆ ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಸುಮಾರು 9,200 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿತ್ತು. 2ನೇ ಹಂತದಲ್ಲಿ ಮುಂಚೂಣಿ ಕೊರೊನಾ ವಾರಿಯರ್ಸ್ಗೆ ಕೋವಿಡ್ ವ್ಯಾಕ್ಸಿನ್ ನೀಡಲು ರಾಜ್ಯ ಸರ್ಕಾರ ಆದೇಶ ನೀಡಿದ್ದು, ಪ್ರಾಯೋಗಿಕವಾಗಿ ಶಿವಮೊಗ್ಗ, ಮೈಸೂರು, ಕೊಪ್ಪಳ ಹಾಗೂ ಧಾರವಾಡ ಜಿಲ್ಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿದೆ.
ಓದಿ:ಇಂಡಿಯಾ ಬುಕ್ ಅಫ್ ರೆಕಾರ್ಡ್ಗೆ ಸೇರಿದ ಮಲೆನಾಡಿನ ಮೂರು ವರ್ಷದ ಬಾಲಕಿ
ಪ್ರಾಯೋಗಿಕವಾಗಿ 4 ಜಿಲ್ಲೆಗಳ ತಲಾ 50 ಜನ ಮುಂಚೂಣಿ ಕೊರೊನಾ ವಾರಿಯರ್ಸ್ಗೆ ಡ್ರೈ ರನ್ ಮಾದರಿಯಲ್ಲಿಯೇ ಲಸಿಕೆ ಲೈವ್ ರನ್ ನಡೆಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಶಿವಮೊಗ್ಗ ಜಿಲ್ಲೆಯಲ್ಲಿ 7,100 ಮುಂಚೂಣಿ ಕೊರೊನಾ ವಾರಿಯರ್ಸ್ ನೋಂದಣಿ ಮಾಡಲಾಗಿದೆ. ಮೊದಲ ದಿನವೇ ಶಿವಮೊಗ್ಗ ತುಂಗಾನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯ್ದ, 50 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಮುಂದಿನ ದಿನದಲ್ಲಿ ಎಲ್ಲಾ ಮುಂಚೂಣಿ ಕೊರೊನಾ ವಾರಿಯರ್ಸ್ಗೆ ವಿಸ್ತರಿಸಲು ನಿರ್ಧರಿಸಲಾಗಿದೆ.