ಶಿವಮೊಗ್ಗ : ಆನಂದ್ ಸಿಂಗ್ ಮತ್ತು ಎಂಟಿಬಿ ಅವರಿಗೆ ಬೇರೆ ಖಾತೆ ಬೇಕು ಅಂತಾ ಕೇಳುತ್ತಿದ್ದಾರೆ. ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮದವರು ಹೇಳುತ್ತಿರುವುದನ್ನು ನೋಡಿದ್ರೆ ಎಲ್ಲರಿಗೂ ಗೊಂದಲವಾಗಿದೆ ಅನ್ನೋ ಹಾಗಿದೆ. ಆದರೆ, ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಆನಂದ್ ಸಿಂಗ್ ಮತ್ತು ಎಂಟಿಬಿ ಅವರು ಅವರ ಭಾವನೆಗಳನ್ನು ಹೇಳಿದ್ದಾರೆ ಅಷ್ಟೇ.. ಈ ಕುರಿತು ಸಿಎಂ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುತ್ತಾರೆ ಎಂದರು.
ಮೇಕೆದಾಟು ವಿಚಾರದಲ್ಲಿ ತಮಿಳುನಾಡಿನವರು ರಾಜಕಾರಣ ಅವರು ಮಾಡ್ತಿದ್ದಾರೆ. ಸುಪ್ರೀಂಕೋರ್ಟ್ ನಿರ್ಧಾರದ ಹಾಗೆ ನಾವು ಮೇಕೆದಾಟು ಯೋಜನೆ ಮಾಡುತ್ತೇವೆ. ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಸುಪ್ರಿಂಕೋರ್ಟ್‌ನ ತೀರ್ಪಿನ ಕುರಿತು ತಮಿಳುನಾಡಿಗರು ಗಮನ ಹರಿಸಬೇಕು ಎಂದರು.
ಇನ್ನು, ಸಿಎಂ ಬೊಮ್ಮಾಯಿ ಹಾಗೂ ದೇವೇಗೌಡರ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹಾಸನ ಜಿಲ್ಲೆಯಲ್ಲಿ ದೇವೇಗೌಡ, ರೇವಣ್ಣ, ಕುಮಾರಸ್ವಾಮಿ ಅಂತಹ ನಾಯಕರ ನಡುವೆ ಪ್ರೀತಂ ಗೌಡ ಗೆದ್ದು ಬಂದಿದ್ದಾರೆ. ಸತತವಾಗಿ ಪಕ್ಷವನ್ನು ಕಟ್ಟಲು ಪ್ರಯತ್ನ ಮಾಡುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಭೇಟಿಯಾಗಿರುವುದು ಪ್ರೀತಂ ಗೌಡರಿಗೆ ಸಮಾಧಾನ ತಂದಿಲ್ಲ. ಆದ್ರೆ, ಬೊಮ್ಮಾಯಿ ಅವರು ಜನತಾದಳದ ನಾಯಕ ದೇವೇಗೌಡರು ಅಂತಾ ಹೋಗಿಲ್ಲ. ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ, ರೈತ ನಾಯಕರು ಅಂತಾ ಹೋಗಿದ್ದಾರೆ. ಇದರಿಂದ ನಮ್ಮ ಸಂಘಟನೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದರು.