ETV Bharat / state

ಡಿ.ಕೆ.ಶಿವಕುಮಾರ್ ಪ್ರಕರಣ ಸಿಬಿಐನಿಂದ ವಾಪಸ್ ಪಡೆದಿರುವುದು ಖಂಡನೀಯ: ಕೆ.ಎಸ್.ಈಶ್ವರಪ್ಪ - ಸಂಸದ ಬಿ ವೈ ರಾಘವೇಂದ್ರ

ಡಿ ಕೆ ಶಿವಕುಮಾರ್ ಪ್ರಕರಣವನ್ನು ಸಿಬಿಐನಿಂದ ವಾಪಸ್ ಪಡೆದಿರುವುದು ಖಂಡನೀಯ, ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡುವುದರ ಕುರಿತು ನಮ್ಮ ರಾಜ್ಯಾಧ್ಯಕ್ಷರು, ಶಾಸಕಾಂಗ ಸಭೆ ತೀರ್ಮಾನಿಸುತ್ತದೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.

ks eshwarappa
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
author img

By ETV Bharat Karnataka Team

Published : Nov 24, 2023, 2:17 PM IST

ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳನ್ನು ಸಿಬಿಐನಿಂದ ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಖಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವಸರವಾಗಿ ಸಚಿವ ಸಂಪುಟ ಸಭೆಯನ್ನು ಕರೆದು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರದ ಈ ಅವಸರದ ಕ್ರಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನವಾಗಿದೆ. ಕಳ್ಳ ಎಂದಿಗೂ ಕಳ್ಳನೇ. ಕಾಂಗ್ರೆಸ್ ಸರ್ಕಾರದವರು 139 ಜನರ ಬೆಂಬಲದ ಮೇಲೆ ಮಾಡಬಾರದ್ದನ್ನೆಲ್ಲಾ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ತಮ್ಮ ಪರ ಎಲ್ಲಾ ನ್ಯಾಯಾಲಯದಲ್ಲಿ ಹಾಕಿದ್ದ ಅಪೀಲು ಬಿದ್ದು ಹೋಗಿದೆ. 5 ವರ್ಷದಲ್ಲಿ 250 ಕೋಟಿ ಆಸ್ತಿ ಜಾಸ್ತಿಯಾಗಿದೆ ಎಂದು ಸಿಬಿಐ ವರದಿಯಲ್ಲೇ ಇದೆ ಎಂದರು.

ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿ ಕಾನೂನು ತಜ್ಞರು ಇಲ್ವಾ?, ಕಾನೂನು ತಜ್ಞರ ಗಮನಕ್ಕೆ ತಾರದೆ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟದಲ್ಲಿ ಇಂತಹ ತೀರ್ಮಾನ ತೆಗೆದುಕೊಂಡಿರುವುದು ಇಡೀ ದೇಶದಲ್ಲೇ ಇದೇ ಮೊದಲು. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರು ಅದು ಹೇಗೆ ಸುಮ್ಮನಿದ್ದಾರೋ ಗೊತ್ತಿಲ್ಲ. ಮುಖ್ಯಮಂತ್ರಿ ಪದವಿ ಉಳಿಸಿಕೊಳ್ಳುವ ಸಲುವಾಗಿ ಸಿದ್ದರಾಮಯ್ಯ ಈ ಕೇಸ್​ ವಾಪಸ್​ಗೆ ಸಹಿ‌ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

33 ಕೋಟಿ ಇರುವುದು 2018 ರಲ್ಲಿ 162.53 ಕೋಟಿಯಾಗಿದೆ. ಇಷ್ಟೆಲ್ಲಾ ಹೇಗೆ ಆಗಲು ಸಾಧ್ಯ. ಅಷ್ಟು ದೊಡ್ಡ ಮಟ್ಟದಲ್ಲಿ ದುಡ್ಡು ಸಿಕ್ಕಿರುವುದನ್ನು ಇಡೀ ದೇಶವೇ ನೋಡಿದೆ. ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ಇವರು ಬಡ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಇದು ಲೂಟಿಕೋರನಿಗೆ ರಕ್ಷಣೆ ಮಾಡಲು ಹೋಗಿರುವ ಮೊದಲ ಪ್ರಕರಣ.‌ ಕ್ಯಾಬಿನೆಟ್​ನಲ್ಲಿ ಈ ರೀತಿ ಕೇಸ್​ ವಾಪಸ್ ಪಡೆದಿರುವುದು ಸಂವಿಧಾನಕ್ಕೆ ಬೆಲೆ ಇಲ್ಲದಂತಾಗಿದೆ. ಸಿಬಿಐ ತನಿಖೆ ಅಂತಿಮ ಹಂತದಲ್ಲಿರುವಾಗ ಈ ರೀತಿ ಮಾಡಿದ್ದು ಎಷ್ಟು ಸರಿ. ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡುವುದರ ಬಗ್ಗೆ ನಮ್ಮ ರಾಜ್ಯಾಧ್ಯಕ್ಷರು, ಶಾಸಕಾಂಗ ಸಭೆ ತೀರ್ಮಾನಿಸುತ್ತದೆ ಎಂದರು.

ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆಗೆ ನೀಡಿದ್ದ ಆದೇಶ ವಾಪಸ್​ ಪಡೆದ ಸರ್ಕಾರ

ಜಾತಿಗಣತಿ ವರದಿ: ಸಿದ್ದರಾಮಯ್ಯ 9 ವರ್ಷದ ಹಿಂದೆಯೇ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇನೆ ಎಂದಿದ್ದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿಡುಗಡೆ ಮಾಡಿಲ್ಲ. ಎಲ್ಲಾ‌ ಜಾತಿಗಳ ಮಧ್ಯೆ ಸಂಘರ್ಷ ತಂದಿಟ್ಟಿದ್ದಾರೆ. ಜಾತಿಗಳ ನಡುವಿನ‌ ಸಂಘರ್ಷಕ್ಕೆ ಸಿದ್ದರಾಮಯ್ಯನವರೇ ನೇರ ಕಾರಣ ಎಂದು ಆರೋಪಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಯಿಂದ ವಾಪಸ್ ಪಡೆದಿರುವುದು ಕಾನೂನು ಬಾಹಿರ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರ ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಡಿಕೆಶಿ ಪ್ರಕರಣ: ರಾಜ್ಯ ಸರ್ಕಾರಗಳಿಗೆ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ- ಸಚಿವ ಸಂತೋಷ್​​ ಲಾಡ್​

ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಂವಿಧಾನ ಬದ್ಧ ಸಂಸ್ಥೆಯಾದ ಸಿಬಿಐ ತನಿಖೆ ನಡೆಸುತ್ತಿದೆ. ಅಕ್ರಮ ಆಸ್ತಿ ಪ್ರಕರಣದ ತೀರ್ಪು ಅಂತಿಮ ಹಂತಕ್ಕೆ ಬರುತ್ತಿದೆ. ಹೈಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇಂತಹ ಹಂತದಲ್ಲಿ ಹೀಗೆ ತೀರ್ಮಾನ ತೆಗೆದುಕೊಳ್ಳುವುದು ಕಾನೂನು ಬಾಹಿರ ಆಗುತ್ತದೆ. ಇದರಿಂದ ರಾಜ್ಯಕ್ಕೆ ಕೆಟ್ಟ ಸಂದೇಶ ರವಾನೆ ಆದಂತೆ ಆಗಿದೆ. ಇದನ್ನು ಸಮಾಜ ಮತ್ತು ನ್ಯಾಯಾಂಗ ಗಮನಿಸುತ್ತಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.