ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭವಿಸಿರುವ ಅನಾಹುತಗಳ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಕೆ ಎಸ್ ಈಶ್ವರಪ್ಪ ಸಭೆ ನಡೆಸಿದ ಮಾಹಿತಿ ಪಡೆದ್ರು.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡ ಅವರು ಮುಂದೆ ಕೈಗೊಳ್ಳಬಹುದಾದ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ್ರು.
ಸಭೆಯಲ್ಲಿ ಶಾಸಕರಾದ ಸಿ. ಟಿ ರವಿ, ವಿ. ಸೋಮಣ್ಣ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್ ರುದ್ರೇಗೌಡ, ಉಪ ಮೇಯರ್ ಚೆನ್ನಬಸಪ್ಪ ಇದ್ದರು.