ETV Bharat / state

ಆರೋಗ್ಯಾಧಿಕಾರಿಗೆ ಕೊರೊನಾ ಲೆಕ್ಕ ಕೇಳಿ ಪತ್ರ ಬರೆದ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ಅವರಿಗೆ ಸಚಿವ ಕೆ.ಎಸ್.ಈಶ್ವರಪ್ಪ ಕೊರೊನಾ ಖರ್ಚು ವೆಚ್ಚದ ಕುರಿತು ಲೆಕ್ಕ ನೀಡುವಂತೆ ಪತ್ರ ಬರೆದಿದ್ದಾರೆ.

K s eshwarappa
K s eshwarappa
author img

By

Published : Aug 14, 2020, 10:57 AM IST

ಶಿವಮೊಗ್ಗ: ಕೊರೊನಾ ನಿಯಂತ್ರಣ ಹಾಗೂ ರೋಗಿಗಳ ಚಿಕಿತ್ಸೆ, ಔಷಧ ಖರೀದಿಯ ಲೆಕ್ಕ ನೀಡುವಂತೆ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಜಿಲ್ಲಾ ಆರೋಗ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ಅವರಿಗೆ ಪತ್ರ ಬರೆದಿದ್ದಾರೆ.

ಕೊರೊನಾ ವೈರಸ್ ತಡೆಗಟ್ಟಲು ಮತ್ತು ವೈರಸ್ ಬಾಧಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದಲ್ಲಿ ಪಿ.ಪಿ.ಇ ಕಿಟ್, ಸ್ಯಾನಿಟೈಸರ್, ವೈದ್ಯಕೀಯ ಸಲಕರಣೆಗಳು ಮತ್ತು ಔಷಧವನ್ನು ದುಪ್ಪಟ್ಟು ಹಣ ಕೊಟ್ಟು ಖರೀದಿ ಮಾಡಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿ ಬಂದಿವೆ.

ಈ ಹಿನ್ನೆಲೆ ಸಚಿವರು, ರಾಜ್ಯ ಸರ್ಕಾರದಿಂದ ಬಂದ ಅನುದಾನ ಹಾಗೂ ವೈದ್ಯಕೀಯ ಖರ್ಚಿನ ಕುರಿತು ಲೆಕ್ಕ‌ ನೀಡಬೇಕು ಎಂದು ಪತ್ರ ಬರೆದಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.