ETV Bharat / state

ಕೆ.ಎಸ್​ ಈಶ್ವರಪ್ಪನವರಿಗೆ ಸಚಿವ ಸ್ಥಾನ ಪಕ್ಕಾ: ಮಗ ಕಾಂತೇಶ್ ಆಡಿಯೋ ವೈರಲ್ - ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ

ಕೆ.ಎಸ್​ ಈಶ್ವರಪ್ಪನವರಿಗೆ ಸಚಿವ ಸ್ಥಾನ ಸಿಗುವುದು ಖಚಿತ ಎನ್ನಲಾಗ್ತಿದ್ದು, ಈ ಕುರಿತ ಅವರ ಮಗನ ಆಡಿಯೋ ವೈರಲ್ ಆಗಿದೆ.

KS Eshwarppa Son Kantesh Audio goes viral
ಕೆ.ಎಸ್​ ಈಶ್ವರಪ್ಪ
author img

By

Published : Aug 4, 2021, 10:29 AM IST

ಶಿವಮೊಗ್ಗ: ಸಿಎಂ ಬದಲಾವಣೆಯಾದ ಬಳಿಕ ಪದೇ ಪದೇ ತಾನು ಸಚಿವ ಸ್ಥಾನದ ಆಕಾಂಕ್ಷಿ ಎಂಬುವುದನ್ನು ಪರೋಕ್ಷವಾಗಿ ಹೇಳುತ್ತಿದ್ದ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಅವರಿಗೆ ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗ್ತಿದೆ.

ಇದಕ್ಕೆ ಪುಷ್ಠಿ ನೀಡುವಂತೆ, ಈಶ್ವರಪ್ಪನವರ ಪುತ್ರ ಕಾಂತೇಶ್ ಅವರು ಪಕ್ಷದ ಕಾರ್ಯಕರ್ತರಿಗೆ ಕಳುಹಿಸಿರುವ ಆಡಿಯೋ ಒಂದು ವೈರಲ್ ಆಗಿದೆ. ಆಡಿಯೋದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ಈಶ್ವರಪ್ಪನವರು ಮತ್ತೊಮ್ಮೆ ಸಚಿವರಾಗುತ್ತಿದ್ದಾರೆ. ಮುಖ್ಯಮಂತ್ರಿಗಳು ಇಂದು ಪ್ರಮಾಣವಚನ ಸ್ವೀಕರಿಸಲು ಕರೆ ಮಾಡಿ ಆಹ್ವಾನಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಪ್ರಯಾಣಿಸಿದ ಮಹೇಶ್ ಕುಮಟಳ್ಳಿ: ಅಥಣಿ ಶಾಸಕನಿಗೆ ಸಚಿವ ಸ್ಥಾನ?

ಶಿವಮೊಗ್ಗ ಜಿಲ್ಲೆಯ ಹಿರಿಯ ಶಾಸಕ ಅರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ಕೂಡ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಯಾರಿಗೆಲ್ಲ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬುವುದು ಇಂದು ಸಂಜೆಯ ವೇಳೆಗೆ ಸ್ಪಷ್ಟವಾಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.