ಶಿವಮೊಗ್ಗ: ರಾಜ್ಯಸಭೆಗೆ ಬಿಜೆಪಿಯಲ್ಲಿನ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಿರುವುದು ನಮ್ಮ ಪಕ್ಷದ ವಿಶೇಷವಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿರವರು ಕಳೆದ 30 ವರ್ಷಗಳಿಂದ ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ದುಡಿದಿದ್ದಾರೆ. ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಪಕ್ಷದವರಿಗೆ ಸರಿಯಾದ ಉತ್ತರ ನೀಡಿದೆ ಎಂದರು.
ಸಚಿವ ಕೆ.ಎಸ್.ಈಶ್ಚರಪ್ಪ ಹೇಳಿಕೆ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿರವರು ಪಕ್ಷಕ್ಕೆ ಸಾಕಷ್ಟು ದುಡಿದಿದ್ದಾರೆ. ಇವರನ್ನು ಇಂದು ಪಕ್ಷ ಗುರುತಿಸುವ ಕಾರ್ಯ ಮಾಡಿದೆ. ಪಕ್ಷದ ಸಂಘಟನೆಗೆ ಒತ್ತು ನೀಡುವ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಿ ರಾಜ್ಯಸಭೆಗೆ ಕಳುಹಿಸುವ ಕಾರ್ಯವನ್ನು ನಮ್ಮ ಹೈಕಮಾಂಡ್ ಮಾಡಿದೆ. ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಡಿ ಅವರು ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುವ ಮೂಲಕ ಪಕ್ಷವನ್ನು ಮುನ್ನಡೆಸುವ ಕಾರ್ಯವನ್ನು ಮಾಡಿದ್ದಾರೆ. ರಾಜ್ಯದ ಸಾಮಾನ್ಯ ಕಾರ್ಯಕರ್ತರನ್ನು ಅದು ಹಿಂದುಳಿದ ವರ್ಗದವರನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದ್ದಕ್ಕೆ ನಮ್ಮ ಪಕ್ಷದ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇನ್ನೂ ಮೂರನೇ ಅಭ್ಯರ್ಥಿ ಆಯ್ಕೆಯ ಕುರಿತು ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.