ETV Bharat / state

ಕುಮಾರ ಬಂಗಾರಪ್ಪ ಕಾಂಗ್ರೆಸ್​ಗೆ ಹೋಗಲ್ಲ: ಸಂಸದ ಬಿ.ವೈ ರಾಘವೇಂದ್ರ ವಿಶ್ವಾಸ - ಬಿ ವೈ ರಾಘವೇಂದ್ರ

MP BY Raghavendra: ಕುಮಾರ ಬಂಗಾರಪ್ಪ ನಮ್ಮ ನಾಯಕರು. ಅವರು ಕಾಂಗ್ರೆಸ್​​ಗೆ ಹೋಗುವುದಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ.

MP BY Raghavendra
ಸಂಸದ ಬಿ.ವೈ ರಾಘವೇಂದ್ರ
author img

By ETV Bharat Karnataka Team

Published : Aug 28, 2023, 1:20 PM IST

ಕುಮಾರ ಬಂಗಾರಪ್ಪ ಸೇರ್ಪಡೆ ವಿಚಾರ: ಸಂಸದ ಬಿ.ವೈ ರಾಘವೇಂದ್ರ ಪ್ರತಿಕ್ರಿಯೆ..

ಶಿವಮೊಗ್ಗ: ಕುಮಾರ ಬಂಗಾರಪ್ಪ ನಮ್ಮ ನಾಯಕರು. ಅವರು ಕಾಂಗ್ರೆಸ್​ಗೆ ಸೇರಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ನವರು ವಿರೋಧ ಪಕ್ಷವನ್ನು ದುರ್ಬಲ ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ಇದು ಫಲ ನೀಡಲ್ಲ ಎಂದರು.

ಕುಮಾರ ಬಂಗಾರಪ್ಪ ನಮ್ಮ ನಾಯಕರು. ನಮ್ಮ ಪಕ್ಷದ ಶಾಸಕರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರು ನಮ್ಮ ಪಕ್ಷದಲ್ಲಿಯೇ ಇದ್ದಾರೆ. ಅವರು ಎಲ್ಲೂ ಹೋಗಲ್ಲ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲ್ಲ. ಕಾಂಗ್ರೆಸ್‌ ತನ್ನ ದೌರ್ಬಲ್ಯವನ್ನು ಮುಚ್ಚಿಕೊಳ್ಳಲು ಎಲ್ಲರನ್ನೂ ಪಕ್ಷಕ್ಕೆ ಕರೆದುಕೊಳ್ಳುತ್ತಿದೆ. ಅವರು ಬರ್ತಾರೆ ಇವರು ಬರ್ತಾರೆ ಎಂದು ಸುಳ್ಳು ಹೇಳಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿದೆ. ರಾಜ್ಯದ ಜನರು ಸಮಸ್ಯೆಯಲ್ಲಿದ್ದಾರೆ. ಸರ್ಕಾರ ಉಚಿತ ವಿದ್ಯುತ್, ಅಕ್ಕಿ ಎಷ್ಟು ದಿನ ನೀಡುತ್ತಾರೋ ಗೊತ್ತಿಲ್ಲ. ಪಂಪ್ ಸೆಟ್ ಇದೆ. ಆದರೆ, ಕರೆಂಟ್ ಇಲ್ಲ. 2 ಕೋಟಿ ರೂ. ವೆಚ್ಚದಲ್ಲಿ 'ಏತ ನೀರಾವರಿ' ಯೋಜನೆ ಮಾಡಲಾಗಿದೆ. ಆದರೆ, ನೀರೆತ್ತಲು ವಿದ್ಯುತ್​ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸೋಷಿಯಲ್ ಮೀಡಿಯಾದಲ್ಲಿ ಕುಮಾರ್ ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿರುವ ಕುರಿತು ಪ್ರತಿಕ್ರಿಯಿಸಿದ ಸಂಸದರು, ಅವರು ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಚರ್ಚೆಗೆ ಹೋಗಿದ್ದಾರೆ. ಅವರಂತೆ ನಾನು ಹೋಗಿದ್ದೆ. ಅದರಲ್ಲಿ ತಪ್ಪೇನೂ‌ ಇಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಶಿಕ್ಷಣ ಸಚಿವರು ಭಗತ್ ಸಿಂಗ್ ಅವರ ಕುರಿತು ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಆ ರೀತಿ ಹೇಳಿಕೆ ನೀಡಿದಾಗಲೇ ಅವರ ಸೈದ್ದಾಂತಿಕ ಅಧಃಪತನ ಪ್ರಾರಂಭವಾಗಿದೆ ಎಂದರು.

ಇದನ್ನೂ ಓದಿ: ಬಿಜೆಪಿ ತೊರೆದು ಯಾರೂ ಕಾಂಗ್ರೆಸ್ ಸೇರುವುದಿಲ್ಲ: ಕೇಂದ್ರ ಸಚಿವ ಭಗವಂತ್ ಖೂಬಾ

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ: ಕಾಂಗ್ರೆಸ್​ ಪಕ್ಷಕ್ಕೆ ಈಗಾಗಲೇ ಹೊಟ್ಟೆ ತುಂಬಿದೆ. ಆದರೆ ಬೇರೆಯವರು ಬಂದು ಊಟ ಮಾಡುವಷ್ಟು ತಟ್ಟೆಯಲ್ಲಿ ಊಟವಿದೆ. ಕಾರಣ ಪಕ್ಷದ ಹಿತದೃಷ್ಟಿಯಿಂದ ಬೇರೆ ಪಕ್ಷದ ನಾಯಕರು ಬಂದಲ್ಲಿ ಸ್ವಾಗತ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.‌

ಶಿರಸಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ತತ್ತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಬರುವ ಶಾಸಕರಿಗೆ, ಮಾಜಿ ಶಾಸಕರಿಗೆ ಬರಲು ಸ್ವಾಗತ. ಅಸಮಾಧಾನ ಇದ್ದಲ್ಲಿ ಅದನ್ನು ಹಿರಿಯ ನಾಯಕರು ಬಗೆಹರಿಸುತ್ತಾರೆ. ಕೆಲವೊಮ್ಮೆ ಅನಿವಾರ್ಯವಾಗಿ ಪಕ್ಷ ಸೇರ್ಪಡೆ ಮಾಡಿಕೊಳ್ಳಬೇಕಾಗುತ್ತದೆ ಎಂದರು.

ಮುಂದುವರೆದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಕಾರವಾರ ಮತ್ತು ಶಿವಮೊಗ್ಗ ಕ್ಷೇತ್ರವನ್ನು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ. ಇದರ ಜೊತೆಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್​ಗೆ ನಾವು ತಯಾರಾಗಿದ್ದು, ಖಂಡಿತ ಕಾಂಗ್ರೆಸ್ ಹೆಚ್ಚಿನ ಕಡೆ ಗೆಲುವು ಸಾಧಿಸಲಿದೆ ಎಂದು ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ : ಶಿರಸಿಯಲ್ಲಿ ಸಚಿವ ಮಧು ಬಂಗಾರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.