ETV Bharat / state

ದೂರ ಶಿಕ್ಷಣ ಫಲಿತಾಂಶ ಹಿಂಪಡೆದು ಮರುಪರೀಕ್ಷೆಗೆ ನಿರ್ಧರಿಸಿದ ಕುವೆಂಪು ವಿವಿ

ಕುವೆಂಪು ವಿಶ್ವವಿದ್ಯಾಲಯದ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಆವೃತ್ತಿಗೆ ಪ್ರವೇಶ ಪಡೆದ ದೂರಶಿಕ್ಷಣದ ಸ್ನಾತಕ ಪದವಿಗಳ ಪ್ರಥಮ ಮತ್ತು ದ್ವಿತೀಯ ವರ್ಷ ಹಾಗೂ ಸ್ನಾತಕೋತ್ತರ ಪದವಿಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೇ ಮುಂದಿನ ಸೆಮಿಸ್ಟರ್‌ಗಳಿಗೆ ಮುಂಬಡ್ತಿ ನೀಡಲು ನಿರ್ಧರಿಸಿ ಫೆಬ್ರವರಿ 09 ರಂದು ಆದೇಶ ಹೊರಡಿಸಲಾಗಿತ್ತು.

kuvempu-university
ಕುವೆಂಪು ವಿಶ್ವವಿದ್ಯಾಲಯ
author img

By

Published : Apr 1, 2022, 10:54 PM IST

ಶಿವಮೊಗ್ಗ: ಕುವೆಂಪು ವಿವಿಯ ದೂರಶಿಕ್ಷಣದ ಸ್ನಾತಕ ಪದವಿಗಳ ಪ್ರಥಮ ಮತ್ತು ದ್ವಿತೀಯ ವರ್ಷ ಹಾಗೂ ಸ್ನಾತಕೋತ್ತರ ಪದವಿಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆ ನಡೆಸುವುದಾಗಿ ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್ ಕುಮಾರ್ ತಿಳಿಸಿದ್ದಾರೆ.

kuvempu university decided to re-examination for distance students
ದೂರಶಿಕ್ಷಣ ಫಲಿತಾಂಶ ಹಿಂಪಡೆದು ಮರುಪರೀಕ್ಷೆಗೆ ನಿರ್ಧರಿಸಿದ ಕುವೆಂಪು ವಿವಿ

ಕುವೆಂಪು ವಿಶ್ವವಿದ್ಯಾಲಯದ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಆವೃತ್ತಿಗೆ ಪ್ರವೇಶ ಪಡೆದ ದೂರಶಿಕ್ಷಣದ ಸ್ನಾತಕ ಪದವಿಗಳ ಪ್ರಥಮ ಮತ್ತು ದ್ವಿತೀಯ ವರ್ಷ ಹಾಗೂ ಸ್ನಾತಕೋತ್ತರ ಪದವಿಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೇ ಮುಂದಿನ ಸೆಮಿಸ್ಟರ್‌ಗಳಿಗೆ ಮುಂಬಡ್ತಿ ನೀಡಲು ನಿರ್ಧರಿಸಿ ಫೆಬ್ರವರಿ 09 ರಂದು ಆದೇಶ ಹೊರಡಿಸಲಾಗಿತ್ತು.

ಆದರೆ, ಮಾರ್ಚ್ ತಿಂಗಳಿನಲ್ಲಿ ನಡೆದ ಸಿಂಡಿಕೇಟ್ ಸಾಮಾನ್ಯ ಸಭೆ ಮತ್ತು ವಿದ್ಯಾವಿಷಯಕ ಪರಿಷತ್ ಸಭೆಗಳ ನಿರ್ಣಯದಂತೆ ಈ ಕ್ರಮವನ್ನು ರದ್ದುಗೊಳಿಸಿ 2022ರ ಏಪ್ರಿಲ್ ಮಾಹೆಯ ಮೂರನೇ ವಾರದಲ್ಲಿ ನಿಯಮಾನುಸಾರ ಗುರುತಿಸಲಾಗುವ ಕಲಿಕಾ ಕೇಂದ್ರಗಳ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುವುದು.

ಸಂಬಂಧಿಸಿದ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಈ ಮೂಲಕ ತಿಳಿಸಲಾಗಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ವಿವಿ ಪರೀಕ್ಷಾಂಗ ವಿಭಾಗದ ಪ್ರಕಟಣೆ ತಿಳಿಸಿದೆ.

ಓದಿ: ಧರ್ಮ ದ್ವೇಷ ಬಿತ್ತುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಮ: ಪೊಲೀಸ್ ಆಯುಕ್ತರಿಗೆ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.