ETV Bharat / state

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 3ನೇ ಬಾರಿಗೆ ಕುವೆಂಪು ವಿವಿ ಪ್ರಾಧ್ಯಾಪಕರು - ಪ್ರಭಾರ ಕುಲಪತಿ ಪ್ರೊ ಎಸ್ ವೆಂಕಟೇಶ್

ಅಮೆರಿಕದ ಸ್ಟ್ಯಾನ್​​ಫೋರ್ಡ್​ ವಿಶ್ವವಿದ್ಯಾಲಯ ಹೊರತಂದಿರುವ ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ಬಾರಿಗೆ ಕುವೆಂಪು ವಿವಿ ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.

ಡಾ. ಬಿ. ಜೆ ಗಿರೀಶ್ ಮತ್ತು ಡಾ. ಬಿ. ಇ ಕುಮಾರಸ್ವಾಮಿ

author img

By ETV Bharat Karnataka Team

Published : Oct 5, 2023, 10:57 PM IST

Updated : Oct 6, 2023, 11:58 AM IST

ಶಿವಮೊಗ್ಗ : ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 2 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಡಾ.ಬಿ.ಜೆ.ಗಿರೀಶ್ ಮತ್ತು ಡಾ.ಬಿ.ಇ ಕುಮಾರಸ್ವಾಮಿ ಸತತ ಮೂರನೇ ವರ್ಷ ಸ್ಥಾನ ಪಡೆದಿದ್ದಾರೆ. ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟಾನ್‌ಫೋರ್ಡ್ ವಿವಿಯ ಜಾನ್ ಅಯೋನ್ನಿಡಿಸ್ ಅಕ್ಟೋಬರ್ 4 ರಂದು ಬಿಡುಗಡೆ ಮಾಡಿರುವ ವಿಶ್ವದ ಅಗ್ರ ಶೇ. 2 ರ ಶ್ರೇಷ್ಠ ವಿಜ್ಞಾನಿಗಳ ಡೇಟಾಬೇಸ್‌ನಲ್ಲಿ ವಿವಿಯ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದು, ವಿವರಗಳು ಅಂತರ್ಜಾಲದಲ್ಲಿ ಲಭ್ಯವಿದೆ.

2018ರಲ್ಲಿ ಪ್ರಾರಂಭವಾದ ಈ ರ‍್ಯಾಂಕಿಂಗ್ ಪಟ್ಟಿ, ಈಗ ಆರನೇ ವರ್ಷಕ್ಕೆ ಕಾಲಿರಿಸಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಗತ್ತಿನ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ, ದತ್ತಾಂಶವನ್ನು ಪ್ರಕಟಿಸಲಾಗಿದೆ. ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 174 ಉಪ ವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿದ್ದು, ವೃತ್ತಿ ಜೀವಮಾನದ ಸಾಧಕರು ಮತ್ತು 2023ನೇ ಸಾಲಿನ ಸಾಧಕರು ಎಂಬೆರಡು ವಿಭಾಗಗಳಲ್ಲಿ ಪ್ರಕಟಿಸಲಾಗಿದೆ.

2023 ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 40,686ನೇ ಸ್ಥಾನ ಪಡೆದಿರುವ ವಿವಿಯ ಗಣಿತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಜೆ.ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಷಯಗಳನ್ನು ಕುರಿತು ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಸತತ ಆರನೇ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧನೆಯನ್ನು ಮಾಡಿದ್ದಾರೆ.

ಇದನ್ನೂ ಓದಿ: ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ ಬಿಡುಗಡೆ : ಕುವೆಂಪು ವಿವಿಯ ಬಿ ಜೆ ಗಿರೀಶ್, ಬಿಇ ಕುಮಾರಸ್ವಾಮಿಯವರಿಗೆ ಸ್ಥಾನ

ಜೀವಮಾನದ ಪಟ್ಟಿಯಲ್ಲೂ ಸ್ಥಾನ: ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಬಿ.ಇ.ಕುಮಾರಸ್ವಾಮಿ 1,79,264ನೇ ಸ್ಥಾನದಲ್ಲಿದ್ದು, ಸತತ ಮೂರನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ. ಈ ವರ್ಷದ ಪಟ್ಟಿಯಲ್ಲಿ ಭಾರತದ ವಿವಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2,000ಕ್ಕೂ ಅಧಿಕ ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ. ಇಬ್ಬರೂ ಪ್ರಾಧ್ಯಾಪಕರು ಜೀವಮಾನದ ಪಟ್ಟಿಯಲ್ಲಿ ಕೂಡ ಸ್ಥಾನ ಪಡೆದಿರುವುದು ಗಮನಾರ್ಹ.

ಸಂಶೋಧನಾ ಚಟುವಟಿಕೆಗಳ ಸ್ಥಿರತೆ: ಸ್ಟಾನ್‌ಫೋರ್ಡ್ ವಿವಿಯ ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಈ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ಇದು ವಿಶ್ವವಿದ್ಯಾಲಯದ ಅಧ್ಯಾಪಕರ ಶೈಕ್ಷಣಿಕ ಗುಣಮಟ್ಟ ಮತ್ತು ಸಂಶೋಧನಾ ಚಟುವಟಿಕೆಗಳ ಸ್ಥಿರತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಪ್ರಭಾರ ಕುಲಪತಿ ಪ್ರೊ.ಎಸ್.ವೆಂಕಟೇಶ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಮತ್ತೊಮ್ಮೆ ಸ್ಥಾನ ಪಡೆದ ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು

Last Updated : Oct 6, 2023, 11:58 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.