ಶಿವಮೊಗ್ಗ : ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವುದು ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ಕಾಯ್ದೆಗಳನ್ನ ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ಈ ಹಿನ್ನೆಲೆ ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕುವೆಂಪು ವಿಶ್ವವಿದ್ಯಾಲಯ, ಸೆ.28ರಂದು ರೈತ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ಈ ಹಿನ್ನೆಲೆ ಆ ದಿನ ನಡೆಯಬೇಕಿದ್ದ ಕುವೆಂಪು ವಿವಿ ವ್ಯಾಪ್ತಿಯ ಸ್ನಾತಕ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.
ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಪಿ ಕಣ್ಣನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.