ಶಿವಮೊಗ್ಗ: ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ಮಾಡಿ 70 ಟೇಟ್ರಾ ಪ್ಯಾಕೇಟ್ ಮದ್ಯವನ್ನು, ಮಾರಾಟ ಮಾಡುತ್ತಿದ್ದ ಮಾರ್ಟಿನ್ ಮ್ಯಾಥ್ಯು ಎಂಬುವನನ್ನು ವಶಕ್ಕೆ ಪಡೆದಿರುವ ಘಟನೆ ಸಾಗರದಲ್ಲಿ ನಡೆದಿದೆ.
ಸಾಗರ ತಾಲೂಕು ಕೊಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರನಕೊಪ್ಪ ಗ್ರಾಮದ ಗಾಯಿತ್ರಿ ದೇವರಾಜ್ ಎಂಬುವವರ ಕಿರಾಣಿ ಅಂಗಡಿಯ ಮೇಲೆ ದಾಳಿ ನಡೆಸಿ ಅಕ್ರಮ ಟೆಟ್ರಾ ಪ್ಯಾಕೆಟ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ, ಮದ್ಯ ಮಾರಾಟ ಮಾಡುತ್ತಿದ್ದ ಮಾರ್ಟಿನ್ ಮ್ಯಾಥ್ಯು ಎಂಬುವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಸಾಗರದ ಅಬಕಾರಿ ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ, ಮದ್ಯಪಾನ ವಿರೋಧಿ ಹೋರಾಟ ಸಮಿತಿ, ಧರ್ಮಸ್ಥಳ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.