ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಯುವಕನನ್ನ ಹಿಡಿದ ಸ್ಥಳೀಯರು ಸಖತ್ ಗೂಸಾ ನೀಡಿರುವ ವಿಡಿಯೋ ವೈರಲ್ ಆಗಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸೀಗೆಬಾಗಿಯ ಆಸ್ಗರ್ ಆಲಿ ಎಂಬ ಯುವಕ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ್ದ. ಇದನ್ನು ಕಂಡ ಸ್ಥಳೀಯರು ಯುವಕನ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ.
ಈ ಘಟನೆ ನಡೆದು ಮೂರು ದಿನಗಳು ಕಳೆದಿವೆ. ಈಗಾಗಲೇ ಆಸ್ಗರ್ ಆಲಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.