ETV Bharat / state

ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‍ಗಳಲ್ಲಿ ಜುಲೈ 23ರಿಂದ ಲಾಕ್​ಡೌನ್.. ಆಯುಕ್ತ ಚಿದಾನಂದ ವಟಾರೆ - Lockdown

ಈ ಪ್ರದೇಶದಲ್ಲಿನ ಸಾರ್ವಜನಿಕರು ಹೊರಗೆ ಹೋಗುವುದನ್ನು ಹಾಗೂ ಬೇರೆ ಪ್ರದೇಶದಲ್ಲಿನ ಸಾರ್ವಜನಿಕರು ಸದರಿ ಪ್ರದೇಶ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಆದರೆ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಮತ್ತು ಹಾಲು ಮಾರಾಟ ಕೇಂದ್ರಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ..

Commissioner Chidananda Watare
ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ
author img

By

Published : Jul 21, 2020, 5:05 PM IST

ಶಿವಮೊಗ್ಗ : ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಮಹಾನಗರ ಪಾಲಿಕೆಯ ಕೆಲವು ವಾರ್ಡ್‍ಗಳ ವ್ಯಾಪ್ತಿಯಲ್ಲಿ ಜುಲೈ 23ರ ಬೆಳಗ್ಗೆ 5 ಗಂಟೆಯಿಂದ ಜುಲೈ 30ರ ಬೆಳಗ್ಗೆ 5ರವರೆಗೆ ಲಾಕ್‍ಡೌನ್ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‍ಗಳಲ್ಲಿ ಜುಲೈ 23ರಿಂದ ಲಾಕ್​ಡೌನ್​​

ಹಳೆ ಶಿವಮೊಗ್ಗ ಕ್ಲಸ್ಟರ್​​ನಲ್ಲಿ ಬರುವ ವಾರ್ಡ್ ಸಂಖ್ಯೆ 22,23,29,30,12,13 ಮತ್ತು 33ರಲ್ಲಿನ ವ್ಯಾಪ್ತಿಯಲ್ಲಿ ಲಾಕ್‍ಡೌನ್ ಜಾರಿಯಾಗಲಿದೆ. ಕೊರೊನಾ ನಿಯಂತ್ರಣ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಬೆಕ್ಕಿನ ಕಲ್ಮಠ, ಬಿ ಹೆಚ್‌ ರಸ್ತೆ, ಅಮೀರ್ ಅಹ್ಮದ್ ವೃತ್ತ, ಅಶೋಕ್ ವೃತ್ತದಲ್ಲಿನ ಕೆಎಸ್​​ಆರ್​​ಟಿಸಿ ಬಸ್ ನಿಲ್ದಾಣ, ಹೊಸ ತೀರ್ಥಹಳ್ಳಿ ರಸ್ತೆ, ಬೈಪಾಸ್ ರಸ್ತೆಯ ತುಂಗಾ ಹೊಸ ಸೇತುವೆವರೆಗೆ ಬರುವಂತಹ ಪ್ರದೇಶದಲ್ಲಿ ಲಾಕ್​ಡೌನ್​ ಜಾರಿಯಾಗಲಿದೆ.

ಈ ಪ್ರದೇಶದಲ್ಲಿನ ಸಾರ್ವಜನಿಕರು ಹೊರಗೆ ಹೋಗುವುದನ್ನು ಹಾಗೂ ಬೇರೆ ಪ್ರದೇಶದಲ್ಲಿನ ಸಾರ್ವಜನಿಕರು ಸದರಿ ಪ್ರದೇಶ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಆದರೆ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಮತ್ತು ಹಾಲು ಮಾರಾಟ ಕೇಂದ್ರಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ತರಕಾರಿ, ದಿನಸಿ ಮತ್ತು ಹಣ್ಣು ಮಾರಾಟ ಕೇಂದ್ರಗಳಿಗೆ ಬೆಳಗ್ಗೆ 5 ರಿಂದ ಬೆಳಗ್ಗೆ 10ರವರೆಗೆ ವಿನಾಯಿತಿ ನೀಡಲಾಗಿದೆ. ಇತರ ಎಲ್ಲಾ ಅಂಗಡಿ-ಮುಂಗಟ್ಟುಗಳ ವ್ಯವಹಾರವನ್ನು ನಿರ್ಬಂಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.