ETV Bharat / state

ಶಿವಮೊಗ್ಗ ಜಿಲ್ಲೆಯಲ್ಲಿ ಬಿಗಿ ಲಾಕ್‍ಡೌನ್ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ - ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಟಿ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆ ಮುಂದಿನ ಒಂದು ವಾರಗಳ ಕಾಲ ಲಾಕ್‍ಡೌನ್ ಇದೇ ರೀತಿ ಮುಂದುವರೆಸಲು ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಸಚಿವ ಕೆ.ಎಸ್.ಈಶ್ವರಪ್ಪ
eshwarappa
author img

By

Published : Jun 13, 2021, 8:44 PM IST

Updated : Jun 13, 2021, 10:32 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಾಕ್‍ಡೌನ್ ಮುಂದುವರಿಕೆ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆ ಮುಂದಿನ ಒಂದು ವಾರಗಳ ಕಾಲ ಲಾಕ್‍ಡೌನ್ ಇದೇ ರೀತಿ ಮುಂದುವರೆಸಲು ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ. ಲಾಕ್‍ಡೌನ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲಾಗಿರುವ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ. ಪ್ರಸ್ತುತ ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಗ್ಗೆ 6ರಿಂದ 8ರವರೆಗೆ ಅವಕಾಶವಿದ್ದು, ಅದನ್ನು ಒಂದು ಗಂಟೆ ವಿಸ್ತರಿಸಲಾಗಿದೆ ಎಂದರು.

ಇನ್ನುಳಿದಂತೆ ಕೈಗಾರಿಕಾ ಚಟುವಟಿಕೆಗಳಿಗೆ ಈಗಿರುವಂತೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸಗಟು ದಿನಸಿ ವ್ಯಾಪಾರಕ್ಕೆ ಬುಧವಾರ ಮತ್ತು ಶನಿವಾರ ಬೆಳಗ್ಗೆ 6ರಿಂದ 9ರವರೆಗೆ ಅವಕಾಶವಿದೆ. ಅಡಿಕೆ ಮಂಡಿಯಲ್ಲಿ ಸಗಟು ವ್ಯಾಪಾರಕ್ಕೆ ಹಾಗೂ ಟೆಂಡರ್​ನಲ್ಲಿ ಭಾಗವಹಿಸುವವರಿಗೆ ಪಾಸು ನೀಡಲಾಗುವುದು. ಎಪಿಎಂಸಿಯಲ್ಲಿ ಬೆಳಗ್ಗೆ 6ರಿಂದ 8ರವರೆಗೆ ವ್ಯವಹಾರಕ್ಕೆ ಅವಕಾಶವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಆದ್ಯತಾ ವಲಯದ ಫಲಾನುಭವಿಗಳಿಗೆ ಹಂತ ಹಂತವಾಗಿ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ವ್ಯವಸ್ಥಿತಗೊಳಿಸಿ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ್, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ರುದ್ರೇಗೌಡ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್ ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಲಕ್ಷ್ಮೀ ಪ್ರಸನ್ನ, ಸಿಇಒ ವೈಶಾಲಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Last Updated : Jun 13, 2021, 10:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.