ಶಿವಮೊಗ್ಗ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಾರಿಯೊಂದು ಬಹುತೇಕ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಕೊಮ್ಮನಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಿಕೆರೆ ಗ್ರಾಮದ ಬಳಿ ನಡೆದಿದೆ.
ಕಾಲುವೆಯಿಂದ ತೋಟಗಳಿಗೆ ನೀರು ಸಾಗಿಸುತ್ತಿದ್ದ ಲಾರಿಯಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಇಳಿದು ಬೆಂಕಿ ನಂದಿಸಲು ಯತ್ನ ಮಾಡಿದ್ರೂ ಪ್ರಯೋಜನವಾಗಿಲ್ಲ.
ನಂತ್ರ ಸ್ಥಳೀಯರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.