ETV Bharat / state

ನವೆಂಬರ್ ಮಾಸಾಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಸಜ್ಜು : ಸಂಸದ ಬಿ ವೈ ರಾಘವೇಂದ್ರ - ಈಟಿವಿ ಭಾರತ್ ಕನ್ನಡ ಸುದ್ದಿ

ಯಾವುದೇ ಒಂದು ರಾಜ್ಯ, ಜಿಲ್ಲೆ, ಸಂಸ್ಥೆ ಅಥವಾ ವ್ಯವಸ್ಥೆ ನಿರೀಕ್ಷಿತ ಪ್ರಗತಿ ಸಾಧಿಸಲು ಮೂಲಭೂತ ಸೌಕರ್ಯಗಳು ಇರಬೇಕಾದುದು ಅಗತ್ಯ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.

ಸಂಸದ ಬಿ ವೈ ರಾಘವೇಂದ್ರ ಸೋಗಾನೆ ವಿಮಾನ ನಿಲ್ದಾಣಕ್ಕೆ ಭೇಟಿ

author img

By

Published : Sep 25, 2022, 3:54 PM IST

ಶಿವಮೊಗ್ಗ: ಇಲ್ಲಿನ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್‌ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಈ ಎಲ್ಲಾ ಕಾಮಗಾರಿಗಳು ನವೆಂಬರ್ ತಿಂಗಳಾಂತ್ಯಕ್ಕೆ ಪೂರ್ಣಗೊಂಡು ವಿಮಾನ ನಿಲ್ಧಾಣ ಲೋಕಾರ್ಪಣೆಗೆ ಸರ್ವಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು.

ಪ್ರಗತಿ ಪರಿಶೀಲನೆ: ಸೋಗಾನೆ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಉಷಾಪಾಧಿ, ಗೌರವಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ರಾಷ್ಟ್ರ ಮತ್ತು ರಾಜ್ಯ ಮಟ್ಟದ ತಂತ್ರಜ್ಞರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರರೊಂದಿಗೆ ಮಾತನಾಡಿದರು.

ಬೊಮ್ಮಾಯಿಯವರ ಸಹಕಾರವೂ ಸ್ಮರಣೀಯ: ಯಾವುದೇ ಒಂದು ರಾಜ್ಯ, ಜಿಲ್ಲೆ, ಸಂಸ್ಥೆ ಅಥವಾ ವ್ಯವಸ್ಥೆ ನಿರೀಕ್ಷಿತ ಪ್ರಗತಿ ಸಾಧಿಸಲು ಮೂಲಭೂತ ಸೌಕರ್ಯಗಳು ಇರಬೇಕಾದುದು ಅಗತ್ಯ. ಬಹುದಿನಗಳ ಈ ಕನಸಿನ ಯೋಜನೆಯ ಅನುಷ್ಠಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರ ಸತತ ಪರಿಶ್ರಮ, ಸಂಕಲ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಹಕಾರವೂ ಕೂಡ ಸ್ಮರಣೀಯವಾದುದು ಎಂದರು.

ಉನ್ನತ ಮಟ್ಟದ ಅಧಿಕಾರಿಗಳಿಂದ ಸಭೆ: ವಿಮಾನ ನಿಲ್ದಾಣದ ವ್ಯವಸ್ಥಿತ ನಿರ್ವಹಣೆ, ಸಂಚಾರ ಸಂಪರ್ಕ ಮತ್ತು ಉಸ್ತುವಾರಿ ಕಾರ್ಯಗಳ ಕುರಿತು ಗಮನಹರಿಸಬೇಕಾದ ಅಗತ್ಯವಿದೆ. ನಿಲ್ದಾಣದ ನಿರ್ವಹಣೆ ಕುರಿತು ಉನ್ನತ ಮಟ್ಟದ ಅಧಿಕಾರಿಗಳು ಸಭೆ ಸೇರಿ ನಿರ್ಣಯ ಕೈಗೊಂಡು ಮುಂದಿನ ಕ್ರಮಗಳಿಗೆ ಅನುವು ಮಾಡಿಕೊಡುವಂತೆ ಗೌರವಗುಪ್ತಾ ಅವರಿಗೆ ಮನವಿ ಮಾಡಿದರು. ವಿಮಾನ ನಿಲ್ದಾಣದ ಉದ್ಘಾಟನೆಗೆ ಜನವರಿ ಮಾಸಾಂತ್ಯದೊಳಗಾಗಿ ಪ್ರಧಾನಮಂತ್ರಿ ಅವರ ಸಮಯವನ್ನು ನಿಗದಿಗೊಳಿಸಿಕೊಡುವಂತೆ ರಾಜ್ಯ ಸರ್ಕಾರದ ವತಿಯಿಂದ ಕೋರಲಾಗುವುದು ಎಂದು ಹೇಳಿದರು.

ಶಿವಮೊಗ್ಗ-ಬೆಂಗಳೂರು ಅಲ್ಲದೇ ನೆರೆ ರಾಜ್ಯಗಳ ಹಲವು ಪ್ರಮುಖ ನಗರಗಳ ಸಂಪರ್ಕ ಹಾಗೂ ಸಂಚಾರಕ್ಕೆ ಕ್ರಮ ವಹಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ. ಅಲ್ಲದೇ ರಾಜ್ಯದ ಉನ್ನತ ಅಧಿಕಾರಿಗಳ ತಂಡ ಸದ್ಯದಲ್ಲಿ ನೆರೆಯ ರಾಜ್ಯ ಮಹಾರಾಷ್ಟ್ರದ ಶಿರಡಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಮತ್ತು ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ ಎಂದು ತಿಳಿಸಿದರು.

ಸರಕು-ಸಾಗಣೆಗೆ ಅನುಕೂಲ: ಈಗಾಗಲೇ ಗತಿಶಕ್ತಿ ಯೋಜನೆಯಡಿ ಕೇಂದ್ರ ಸರ್ಕಾರವು 65 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಶಿಥಿಲೀಕರಣ ಘಟಕಗಳು, ಗೋದಾಮುಗಳು, ಕಿರು ಉದ್ಯಮ ಘಟಕಗಳ ಆರಂಭದಿಂದಾಗಿ ಸರಕು-ಸಾಗಣೆಗೆ ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಬ್ರಿಗೇಡಿಯರ್ ಪೂರ್ವಿಮಠ್, ರಾಜೀವ್‌ಕುಮಾರ್ ರೈ, ಹೆಪ್ಸಿಬಾರಾಣಿ ಕೊರ್ಲಪಾಟಿ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹೆಚ್.ಆರ್ ರಾಜಪ್ಪ, ರೈಟ್ಸ್ ಸಂಸ್ಥೆಯ ಇಂಜಿನಿಯರ್ ರವಿ, ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಎಂ ಲಕ್ಷ್ಮೀಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಕಾಂತರಾಜ್, ಸಂಪತ್‌ಕುಮಾರ್ ಮುಂತಾದ ಅಧಿಕಾರಿಗಳು ಹಾಗೂ ವಿಮಾನಯಾನ ಸಂಸ್ಥೆಯ ತಂತ್ರಜ್ಞರು, ಗುತ್ತಿಗೆದಾರರು ಉಪಸ್ಥಿತರಿದ್ದರು.

ಓದಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೆಟ್ರೋ ಕಾಮಗಾರಿ ಚುರುಕು: ಗರ್ಡರ್ ಅಳವಡಿಕೆ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.