ETV Bharat / state

ರಾಹುಲ್ ಗಾಂಧಿ ಭೇಟಿ ಮಾಡಿದ ಮಧು ಬಂಗಾರಪ್ಪ.. ಪಕ್ಷ ಬಲವರ್ಧನೆ ಬಗ್ಗೆ ಮಾತುಕತೆ - former Mla Madhu Bangarappa met Rahul Gandhi

ನವದೆಹಲಿಯಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಯನ್ನು ಭೇಟಿಯಾಗಿದ್ದಾರೆ. ಮಧು ಬಂಗಾರಪ್ಪ ಕಾಂಗ್ರೆಸ್​ ಪಕ್ಷ ಸೇರ್ಪಡೆ ಬಗ್ಗೆ ರಾಹುಲ್ ಹರ್ಷ ವ್ಯಕ್ತಪಡಿಸಿದ್ದಾರೆ.

madhu-bangarappa-met-rahul-gandhi
ರಾಹುಲ್ ಗಾಂಧಿ ಭೇಟಿ ಮಾಡಿದ ಮಧು ಬಂಗಾರಪ್ಪ
author img

By

Published : Sep 9, 2021, 6:06 PM IST

ನವದೆಹಲಿ/ಶಿವಮೊಗ್ಗ: ಇತ್ತಿಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

madhu-bangarappa-met-rahul-gandhi
ರಾಹುಲ್ ಗಾಂಧಿ ಜೊತೆ ಮಧು ಬಂಗಾರಪ್ಪ ಮಾತುಕತೆ

ಈ ವೇಳೆ ರಾಜ್ಯ ಹಾಗೂ ದೇಶದ ರಾಜಕಾರಣದ ಬಗ್ಗೆ ಚರ್ಚಿಸಿದ್ದಾರೆ. ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ರಾಹುಲ್ ಗಾಂಧಿ ಹರ್ಷ ವ್ಯಕ್ತಪಡಿಸಿದ್ದಾರೆ. ತಮ್ಮ ಕುಟುಂಬದ ಜೊತೆ ಬಂಗಾರಪ್ಪ ಅವರ ಒಡನಾಟದ ಬಗ್ಗೆ ಮೆಲುಕು ಹಾಕಿದ್ದಾರೆ.

ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿ ನೀಡಿದ್ದ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಕ್ಷ ಬಲವರ್ಧನೆ ಹಾಗೂ ಇನ್ನಿತರ ರಾಜಕೀಯ ವಿದ್ಯಮಾನಗಳ ಬಗ್ಗೆ ಸಲಹೆ ನೀಡಿ ಮುಂದಿನ ರಾಜಕೀಯಕ್ಕೆ ಶುಭ ಹಾರೈಸಿದ್ದಾರೆ‌. ಈ ವೇಳೆ ಕರ್ನಾಟಕ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲ ಅವರು ಉಪಸ್ಥಿತರಿದ್ದರು.

ಓದಿ: ರಾಜ್ಯವನ್ನು ಕಾಂಗ್ರೆಸ್‌ಮುಕ್ತ ಮಾಡುವತ್ತ ಜನರು ಒಲವು ತೋರಿಸಿದ್ದಾರೆ: ಕಟೀಲ್

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.