ಶಿವಮೊಗ್ಗ : ಕನಕ ಪೀಠದ ಹೊಸದುರ್ಗದ ಶಾಖಾ ಮಠದ ಸ್ವಾಮೀಜಿಗಳಿಗ ಸಚಿವ ಮಾಧುಸ್ವಾಮಿರವರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಕ್ತ ಕನಕದಾಸ ಕುರುಬರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕನಕ ಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿಗಳನ್ನು ಸಚಿವ ಮಾಧುಸ್ವಾಮಿಯವರು ಏಕವಚನದಲ್ಲಿ ನಿಂದಿಸಿದ್ದಾರೆ. ಸ್ವಾಮೀಜಿಯ ವಿರುದ್ದ ಕನಿಷ್ಟಮಟ್ಟದ ಭಾಷೆ ಬಳಕೆ ಮಾಡಿದ್ದಾರೆ. ಸಚಿವ ಮಾಧುಸ್ವಾಮಿಯವರು ಕನಕ ಸಮಾಜಕ್ಕೆ ಅಪಮಾನ ಮಾಡಿದ್ದಾರೆ. ಇದರಿಂದ ಸಚಿವರು ತಮ್ಮ ತಪ್ಪನ್ನು ಒಪ್ಪಿಕೊಂಡು ಈಶ್ವರಾನಂದಪುರಿ ಸ್ವಾಮೀಜಿಗಳ ಬಳಿ ಕ್ಷಮೆ ಕೇಳಬೇಕು ಎಂದು ಭಕ್ತ ಕನಕದಾಸ ಕುರುಬರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಕುರುಬ ಸಮಾಜದ ಶ್ರೀಗಳಾದ ಶ್ರೀಈಶ್ವರನಂದಪುರಿ ಸ್ವಾಮೀಜಿಗಳಿಗೆ ಅಗೌರವ ತೋರಿರುವ ಕಾನೂನು ಸಚಿವ ಮಾಧುಸ್ವಾಮಿಯವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ರಂಗನಾಥ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ. ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗಿರಬೇಕು ಎಂದು ಎಚ್ಚರಿಸಿದರು.