ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಜಯನಗರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿ ರವಿಕಿರಣ (27)ನಿಂದ ₹10 ಸಾವಿರ ಮೌಲ್ಯದ 250 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಇಲ್ಲಿನ ವಿನಾಯಕ ನಗರದ 2ನೇ ಕ್ರಾಸ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.