ETV Bharat / state

ಶಿವಮೊಗ್ಗ: ಅಂಗಡಿಯಲ್ಲಿ ವ್ಯಕ್ತಿ ಆತ್ಮಹತ್ಯೆ; ಲಾರಿಯಲ್ಲಿ ಕೊಳೆತ ಶವ ಪತ್ತೆ - ಶಿವಮೊಗ್ಗ ಅಪರಾಧಗಳು

ವ್ಯಕ್ತಿಯೊಬ್ಬರು ಅಂಗಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡರೆ ಮತ್ತೊಂದೆಡೆ, ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಎರಡೂ ಘಟನೆಗಳು ಶಿವಮೊಗದಲ್ಲಿ ನಡೆದಿವೆ.

ಶಿವಮೊಗ್ಗ ಅಪರಾಧಗಳು
ಶಿವಮೊಗ್ಗ ಅಪರಾಧಗಳು
author img

By ETV Bharat Karnataka Team

Published : Dec 29, 2023, 7:02 PM IST

ಶಿವಮೊಗ್ಗ: ಸಾಗರ ರಸ್ತೆಯ ಲಯನ್ ಸಫಾರಿ ಮುಂಭಾಗದ ಗೂಡಂಗಡಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಅಂಗಡಿ ತೆರೆಯಲು ಮಾಲೀಕ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಸಾಗರ ರಸ್ತೆಯ ಶಕ್ತಿಧಾಮದ ನಿವಾಸಿ ಸತೀಶ್ (40) ಎಂದು ಗುರುತಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲಾರಿಯಲ್ಲಿ ಕೊಳೆತ ಮೃತದೇಹ ಪತ್ತೆ: ಬಿ.ಹೆಚ್ ರಸ್ತೆಗೆ ಹೊಂದಿಕೊಂಡಿರುವ ಸರ್.ಎಂ.ವಿ ವಿಶ್ವೇಶ್ವರಯ್ಯ ರಸ್ತೆಯಲ್ಲಿನ ಖಾಲಿ ಜಾಗದಲ್ಲಿ ಲಾರಿಗಳನ್ನು ನಿಲ್ಲಿಸಲಾಗುತ್ತದೆ. ಇಲ್ಲಿನ ಲಾರಿಯೊಂದರಲ್ಲಿ ಮೊಹಮ್ಮದ್ ಅಲಿ(50) ಎಂಬವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕೋಟೆ ಪೊಲೀಸರು ಆಗಮಿಸಿ ಪರಿಶೀಲಿಸಿ, ಶವವನ್ನು ಶವಾಗಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಭದ್ರಾವತಿಯಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು: ಭದ್ರಾವತಿ ಪಟ್ಟಣದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಂಡರ್ ಬ್ರಿಡ್ಜ್ ಬಳಿ ವ್ಯಕ್ತಿ ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ: ರಾಯಚೂರು: ಹಳೆ ವೈಷಮ್ಯ ಹಿನ್ನೆಲೆ ರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.