ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ವೃತ್ತಿಯಲ್ಲಿ ಶಿಕ್ಷಕರಾಗಿರುವ ಇವರು ರಾಜ್ಯ ಪ್ರಾಥಮಿಕ ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿದ್ದರು. ಕಳೆದ ನಾಲ್ಕು ದಿನದ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.
ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ವಿವರ:
ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ವೃದ್ಧೆಯೋರ್ವರು ಮೊದಲು ಸೋಂಕಿನಿಂದ ಸಾವನ್ನಪ್ಪಿದರು. ಬಳಿಕ ಶಿಕಾರಿಪುರದ ಕವಾಸಪುರದ ಅಜ್ಜಿ ಹಾಗೂ ಇಂದು ಮೃತಪಟ್ಟ ಶಿಕ್ಷಕ ಸೇರಿದಂತೆ ಜಿಲ್ಲೆಯಲ್ಲಿ ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಮೃತರ ಸಂಖ್ಯೆ ಏರುತ್ತಲೇ ಇರುವುದು ಜಿಲ್ಲೆಯ ಜನರಲ್ಲಿ ಆಂತಕ ಸೃಷ್ಟಿ ಮಾಡಿದೆ.