ETV Bharat / state

ಶಿವಮೊಗ್ಗ: ಕೇಬಲ್​ನಿಂದ ಉಸಿರುಗಟ್ಟಿಸಿ‌ ಪತ್ನಿ‌ ಕೊಂದ ಪತಿಗೆ ಜೀವಾವಧಿ ಶಿಕ್ಷೆ - ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಮನೆಯಲ್ಲಿದ್ದ ಕೇಬಲ್​ನಿಂದ ಹೆಂಡತಿಯ ಉಸಿರುಗಟ್ಟಿಸಿ ಕೊಲೆಗೈದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

accused
ಅಲ್ಲಾಭಕ್ಷಿ
author img

By

Published : Jul 21, 2023, 12:41 PM IST

ಶಿವಮೊಗ್ಗ : ಡಿಶ್ ಕೇಬಲ್​ನಿಂದ ಹೆಂಡತಿಯ ಉಸಿರುಗಟ್ಟಿಸಿ ಕೊಲೆಗೈದ ಗಂಡನಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ. ಇಲ್ಲಿನ ಆಶ್ರಯ ಬಡಾವಣೆಯ ಅಲ್ಲಾಭಕ್ಷಿ (38) ಎಂಬಾತ ಶಿಕ್ಷೆಗೆ ಗುರಿಯಾದ ವ್ಯಕ್ತಿ.

ಪ್ರಕರಣದ ಹಿನ್ನೆಲೆ : 2021ರಿಂದ ಶಿವಮೊಗ್ಗದ ಆಶ್ರಯ ಬಡಾವಣೆಯಲ್ಲಿ ಪತ್ನಿಯೊಂದಿಗೆ ವಾಸವಿದ್ದ ಅಲ್ಲಾಭಕ್ಷಿ ಪ್ರತಿನಿತ್ಯ ಕುಡಿದು ಜಗಳ ಮಾಡುತ್ತಿದ್ದ. ಇಬ್ಬರ ನಡುವೆ ಪ್ರಾರಂಭವಾದ ಜಗಳ ತಾರಕಕ್ಕೇರಿದ್ದು, ಈ ವೇಳೆ ಮನೆಯಲ್ಲಿದ್ದ ಡಿಶ್ ವಯರ್​ನಿಂದ ಪತ್ನಿಯ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಮೃತಳ ತಾಯಿ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.‌

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು. ನ್ಯಾಯಾಧೀಶರಾದ ಕೆ.ಮಾನು ಅವರು ವಾದ-ಪ್ರತಿವಾದ ಆಲಿಸಿ ಆರೋಪಿಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಅಲ್ಲಾಭಕ್ಷಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದಾರೆ‌. ದಂಡ ಕಟ್ಟಲು ವಿಫಲವಾದ್ರೆ ಹೆಚ್ಚುವರಿ 4 ತಿಂಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ.

ಇದನ್ನೂ ಓದಿ : ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

ಹಲ್ಲೆ ನಡೆಸಿದವರಿಗೆ ಕೋರ್ಟ್ ವಿಶೇಷ ಶಿಕ್ಷೆ : ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2018 ರಲ್ಲಿ 49 ವರ್ಷದ ಮಹಿಳೆಯು ತನ್ನ ಜಮೀನಿನಲ್ಲಿ ಟ್ರ್ಯಾಕ್ಟರ್​ನಲ್ಲಿ ಉಳುಮೆ ಮಾಡುವಾಗ ಸಂಬಂಧಿಗಳಾದ ನೇತ್ರಾಜ ಹಾಗೂ ಆತನ ಹೆಂಡತಿ‌ ಗಾಯತ್ರಿ ಅಡ್ಡಿ ಪಡಿಸಿ, ಹಲ್ಲೆ ನಡೆಸಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಕಲಂ 448, 504, 323, 324, 354 (B),307, 114, 34 ಐಪಿಸಿ ಅಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಪತ್ನಿ ಕೊಲೆ ಪ್ರಕರಣ.. ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮೈಸೂರು ಜಿಲ್ಲಾ ನ್ಯಾಯಾಲಯ

ಈ ಕುರಿತು ತನಿಖೆ ನಡೆಸಿದ ಅಂದಿನ ಪಿಎಸ್ಐ ಜಗದೀಶ್ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಆರೋಪಿಗಳಾದ ನೇತ್ರಾಜ ಹಾಗೂ ಗಾಯತ್ರಿಗೆ ಅವರಿಗೆ 12 ಸಾವಿರ ರೂ. ದಂಡ ಹಾಗೂ ಪ್ರತಿ ತಿಂಗಳ ಮೊದಲ ಭಾನುವಾರ ಕುಂಸಿ ಪೊಲೀಸ್ ಠಾಣೆಗೆ ಹೋಗಿ ಪಿಐ (ಪೊಲೀಸ್​ ಇನ್ಸ್​ಪೆಕ್ಟರ್​) ಅವರನ್ನು ಭೇಟಿ ಮಾಡುವ ಶಿಕ್ಷೆಯನ್ನು ನೀಡಿದ್ದಾರೆ.

ಇದನ್ನೂ ಓದಿ : Vijayapura crime : ಪತ್ನಿಯ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ.. ಕಾಮುಕನಿಗೆ 20 ವರ್ಷ ಜೀವಾವಧಿ ಶಿಕ್ಷೆ ವಿಧಿಸಿದ ಪೋಕ್ಸೋ ಕೋರ್ಟ್​

Ramanagara Crime : ಆಸ್ತಿಗಾಗಿ ತಾಯಿಯ ಕೊಲೆ ಮಾಡಿದ್ದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.