ETV Bharat / state

ಯಡಿಯೂರಪ್ಪಗೆ ಪೂರ್ಣಾವಧಿ ಪೂರೈಸಲು ಅವಕಾಶ ಕೊಡಿ : ಮರುಳಸಿದ್ಧ ಸ್ವಾಮೀಜಿ - ಸಿಎಂ ಬದಲಾವಣೆ ವಿಚಾರ

ಸಿಎಂ ಬದಲಾವಣೆಯ ವಿಚಾರದಲ್ಲಿ ಬಿಎಸ್​ವೈ ಪರ ಮಾತನಾಡಿರುವ ಬಸವಕೇಂದ್ರದ ಮರುಳಸಿದ್ಧ ಸ್ವಾಮೀಜಿ, ಯಡಿಯೂರಪ್ಪ ಅವರನ್ನು ಸಿಎಂ ಆಗಿ ಮುಂದುವರಿಸುವಂತೆ ಆಗ್ರಹಿಸಿದ್ದಾರೆ.

Marulasidda Swamiji
ಬಸವಕೇಂದ್ರದ ಮರುಳಸಿದ್ಧ ಸ್ವಾಮೀಜಿ
author img

By

Published : Jul 22, 2021, 7:54 AM IST

ಶಿವಮೊಗ್ಗ : ಮುಖ್ಯಮಂತ್ರಿ ಬಿ‌.ಎಸ್ ಯಡಿಯೂರಪ್ಪ ಅವರಿಗೆ ಪೂರ್ಣಾವಧಿ ಅಧಿಕಾರ ನಡೆಸಲು ಹೈಕಮಾಂಡ್ ಅವಕಾಶ ಮಾಡಿಕೊಡಬೇಕು ಎಂದು ಬಸವ ಕೇಂದ್ರದ ಮರುಳಸಿದ್ಧ ಸ್ವಾಮೀಜಿ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಸರ್ವ ಜನಾಂಗದ ಆಶಯಗಳಿಗೆ ಸ್ಪಂದಿಸುತ್ತ ಯಡಿಯೂರಪ್ಪ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರವಾಹ, ಕೊರೊನಾ ಸಂದರ್ಭಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಇಂತಹ ಮುಖ್ಯಮಂತ್ರಿಗಳನ್ನು ದಿಢೀರ್ ಬದಲಾಯಿಸುವುದು ಸರಿಯಲ್ಲ ಎಂದರು.

ಬಸವಕೇಂದ್ರದ ಮರುಳಸಿದ್ಧ ಸ್ವಾಮೀಜಿ

ಓದಿ : ನಾಯಕತ್ವ ಬದಲಾವಣೆ ಇಲ್ಲ, ಯಾವತ್ತಿದ್ದರೂ ಬಿಎಸ್​ವೈ ನಮ್ಮ ನಾಯಕ: ರೇಣುಕಾಚಾರ್ಯ

ಎಲ್ಲರೂ ಒಪ್ಪಿಕೊಳ್ಳುವ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ಬೆಳವಣಿಗೆ ಅಲ್ಲ. ಅವರಿಗೆ ನೆಮ್ಮದಿಯಿಂದ ಆಡಳಿತ ನಡೆಸಲು ಪಕ್ಷದ ಹೈಕಮಾಂಡ್ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.