ಶಿವಮೊಗ್ಗ: ಮಾಸ್ಕ್ ಮತ್ತು ಸ್ಯಾನಿಟೈಜರ್ ಗಳನ್ನು ಅತ್ಯಗತ್ಯ ವಸ್ತುಗಳ ಪಟ್ಟಿಗೆ ಸೇರಿಸಿದ್ದೇ ತಡ, ಅಧಿಕಾರಿಗಳು ಮೆಡಿಕಲ್ ಹಾಗೂ ದಿನಸಿ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ ಕಳಪೆ ಗುಣಮಟ್ಟದ ಮುಖಗವಸುಗಳನ್ನು ವಶಕ್ಕೆ ಪಡೆದು ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ದಾರೆ.
ಮಾಸ್ಕ್ ಕೃತಕ ಅಭಾವ ಸೃಷ್ಟಿ ಹಾಗೂ ಎಂಆರ್ಪಿಗಿಂತ ಅಧಿಕ ಬೆಲೆಗೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ, ನಗರದ ಹಲವೆಡೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಔಷಧ ನಿಯಂತ್ರಣ ಜಂಟಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಕಳಪೆ ಗುಣಮಟ್ಟದ ಮಾಸ್ಕ್ಗಳನ್ನು ಮಾರಾಟ ಮಾಡದಂತೆ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಎ.ಟಿ. ಜಯಪ್ಪ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಎಚ್.ಎಸ್. ರಾಜು, ಡ್ರಗ್ಸ್ ಇನ್ಸ್ಪೆಕ್ಟರ್ ನಂದಿನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.