ಶಿವಮೊಗ್ಗ: ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಹಾವೀರ ಸರ್ಕಲ್ ಬಳಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.
ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಪೆಟ್ರೋಲ್, ಡೀಸೆಲ್, ಗ್ಯಾಸ್ ದರಗಳು ಏರುತ್ತಲೇ ಇದ್ದು, ದೇಶದ ಸಾಮಾನ್ಯ ಜನರು ಜೀವನ ನಡೆಸುವುದು ಕಷ್ಟವಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಹಾವೀರ ಸರ್ಕಲ್ ಬಳಿ ಮಾನವ ಸರಪಳಿ ರಚಿಸಿ, ಗ್ಯಾಸ್ ತಲೆ ಮೇಲೆ ಹೊತ್ತು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಜನ ವಿರೋಧಿ ಕಾಯ್ದೆ ಹಾಗೂ ನೀತಿಗಳನ್ನು ಜಾರಿಗೆ ತರುವ ಮೂಲಕ ದೇಶದಲ್ಲಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿದೆ. ಇದರಿಂದಾಗಿ ದೇಶದ ಜನರು ಸಂಕಷ್ಟ ಅನುಭವಿಸುತ್ತಿದ್ದು, ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ತೈಲ ಬೆಲೆ ಏರಿಕೆ, ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.