ETV Bharat / state

ಶಿವಮೊಗ್ಗದಲ್ಲಿ ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ವಸತಿ ನಿಲಯದ ಗೋಡೆ ಮೇಲೆ ಡೆತ್ ನೋಟ್ ಬರೆದು ಎಂಬಿಬಿಎಸ್​​ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

mbbs-student-committed-suicide-by-writing-a-death-note-on-the-wall
ಗೋಡೆ ಮೇಲೆ ಡೆತ್ ನೋಟ್ ಬರೆದಿಟ್ಟು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
author img

By

Published : Apr 30, 2023, 8:39 PM IST

ಶಿವಮೊಗ್ಗ: ಎಂಬಿಬಿಎಸ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಭಯ್ ರೆಡ್ಡಿ (22) ಮೃತ ವಿದ್ಯಾರ್ಥಿ. ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಇವರು ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ಡೆತ್​​ ನೋಟ್​​ ಬರೆದು ನೇಣಿಗೆ ಶರಣಾಗಿದ್ದಾರೆ.

ಕಾಲೇಜಿನ ಪ್ರಾಂಶುಪಾಲರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಯು ಬೆಂಗಳೂರಿನ ಬೊಮ್ಮಸಂದ್ರದ ನಿವಾಸಿಯಾಗಿದ್ದು, ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿ ಅಭ್ಯಾಸ ಮಾಡುತ್ತಿದ್ದರು. ಶಿವಮೊಗ್ಗ ಗ್ರಾಮಾಂತರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೈದಿ ಆತ್ಮಹತ್ಯೆ: ಶಿವಮೊಗ್ಗ ನಗರದ ಕೇಂದ್ರ ಕಾರಾಗೃಹದಲ್ಲಿ‌ ಕೈದಿಯೊಬ್ಬ ಜೈಲು ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಕರುಣಾಕರ ದೇವಾಡಿಗ (24) ಆತ್ಮಹತ್ಯೆ ಮಾಡಿಕೊಂಡ ಕೈದಿ. ಶುಕ್ರವಾರ ಬೆಳಗ್ಗೆ ಕರುಣಾಕರ ದೇವಾಡಿಗ ತನ್ನ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಬೆಳಗ್ಗೆ ಜೈಲ್​ನಲ್ಲಿ ತಿಂಡಿಗೆಂದು ಬಿಟ್ಟಿರುವ ವೇಳೆ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಭದ್ರಾವತಿ ತಾಲೂಕು ಸುಣ್ಣದ ಹಳ್ಳಿಯ ಆಂಜನೇಯ ದೇವಾಲಯದ ಮುಂಭಾಗ ವೃದ್ದೆಯೊಬ್ಬರು ಭಿಕ್ಷೆ ಬೇಡಿಕೊಂಡು ದೇವಾಲಯದ ಆವರಣದಲ್ಲಿಯೇ ವಾಸ ಮಾಡುತ್ತಿದ್ದರು. ಕೈದಿ ಕರುಣಾಕರ ದೇವಾಡಿಗ ದೇವಾಲಯದ ಹುಂಡಿ ಕಳ್ಳತನಕ್ಕೆಂದು ಬಂದು, ಅಲ್ಲಿದ್ದ ಅಜ್ಜಿಯ ಮೈ ಮೇಲಿನ ಒಡವೆಗಳನ್ನು ಕಂಡು ವೃದ್ಧೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆ ಸಂಬಂಧ ಭದ್ರಾವತಿ‌ ಪೇಪರ್ ಟೌನ್ ಪೊಲೀಸರು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದ ಆಧಾರದ ಮೇಲೆ ಕರುಣಾಕರ ದೇವಾಡಿಗನನ್ನು ಬಂಧಿಸಿದ್ದರು. ಮೃತ ಕೈದಿಯು ಮೂಲತಃ ಉಡುಪಿ ಜಿಲ್ಲೆಯವರಾಗಿದ್ದು, ಭದ್ರಾವತಿಯಲ್ಲೇ ವಾಸವಾಗಿದ್ದನು.‌ ಈತ ಜೈಲಿಗೆ ಸೇರಿದ ನಂತರ ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದ‌ನು. ಇದಕ್ಕಾಗಿ ಜೈಲ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೆಲಸ ಮುಗಿಸಿಕೊಂಡು ಮನೆಗೆ ಹೋಗ್ತಿದ್ದ ಮಹಿಳೆ ಮೇಲೆ ಆಟೋ ಚಾಲಕರಿಂದ ಗ್ಯಾಂಗ್​ ರೇಪ್

7ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ: ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಯೊಬ್ಬಳು ಕಟ್ಟಡದಿಂದು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಯಿಶಾ ಬಿ.ಆರ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಬಿಎಸ್​ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಆಯಿಶಾ ಇಂದು ಬೆಳಗ್ಗೆ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್​ನ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯ ಮೈಮೇಲೆ ಬಾಲ್ ಎಸೆದಿದ್ದಕ್ಕೆ ಯುವಕನ ಹತ್ಯೆ ; ಓರ್ವ ಆರೋಪಿಯ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.