ಶಿವಮೊಗ್ಗ: ಮೆಡಿಕಲ್ ವಿದ್ಯಾರ್ಥಿನಿವೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಲಲಿತಾ (22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ನಗರದ ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಮೆಡಿಕಲ್ ಓದುತ್ತಿದ್ದಳು. ಕಾಲೇಜಿನ ಹಾಸ್ಟೆಲ್ ರೂಮ್ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಮೃತ ಯುವತಿ ಭದ್ರಾವತಿಯ ವೆಂಕಟೇಶ್ ಎಂಬುವರ ಮಗಳು ಎಂಬ ವಿಚಾರ ತಿಳಿದು ಬಂದಿದೆ.
ಓದಿ: ಬಿಜೆಪಿ ನಾಯಕರ ಹೆಸರಲ್ಲಿ ವಂಚನೆ: ಯುವರಾಜ್ ಬ್ಯಾಂಕ್ ಲಾಕರ್ ತೆರೆದ ಸಿಸಿಬಿ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ಹಾಗೂ ಸಿಮ್ಸ್ ಮೆಡಿಕಲ್ ಕಾಲೇಜಿನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.