ಶಿವಮೊಗ್ಗ : ನಗರದ ಜಿಲ್ಲಾಧಿಕಾರಿ ಸಂಭಾಗಣದಲ್ಲಿ ಮಹಾನಗರ ಪಾಲಿಕೆ ಪರಿಶೀಲನಾ ಸಭೆ ನಡೆಯಿತು.
ಈ ಸಭೆಯಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಮಹಾನಗರ ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ 24 ಗಂಟೆಯೂ ಕುಡಿಯುವ ನೀರು ಸಿಗಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಕುಡಿಯುವ ನೀರು ಹಾಗೂ ಮಳೆಗಾಲದಲ್ಲಿ ವಿದ್ಯುತ್ ವ್ಯತ್ಯಯ ಆಗುವುದನ್ನು ತಪ್ಪಿಸಬೇಕು. ಜನರಿಗೆ ಯಾವುದೇ ಸಮಸ್ಯೆ ಗಳಾಗದಂತೆ ನೋಡಿಕೊಳ್ಳಿ ಹಾಗೂ ಪಾಲಿಕೆ ವಾರ್ಡಗಳಿಗೆ ಅಧಿಕಾರಿಗಳು ತೆರಳಿ ಸಮಸ್ಯೆ ಆಲಿಸಿ ವರದಿ ನೀಡಬೇಕು ಎಂದು ತಿಳಿಸಿದರು.
ಪಾಲಿಕೆ ಸದಸ್ಯರು ತಮ್ಮ ವಾರ್ಡ್ಗಳ ಸಮಸ್ಯೆ ಬಗ್ಗೆ ಸಚಿವರಿಗೆ ದೂರು ನೀಡಿದರು. ಇದಕ್ಕೆ ಸಚಿವರು ಅಧಿಕಾರಿಗಳಿಗೆ ಸೂಚಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಆದೇಶಿಸಿದರು.