ETV Bharat / state

ಮಾನ್ಸೂನ್ ಮುಗಿಯುವ ತನಕ ಮರಳುಗಾರಿಕೆ ಸ್ಥಗಿತ: ಡಿಸಿ ಕೆ.ಬಿ.ಶಿವಕುಮಾರ್ ಆದೇಶ - ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮಾನ್ಸೂನ್ ಮುಗಿಯುವ ತನಕ ಜಿಲ್ಲೆಯಲ್ಲಿ ಮರಳುಗಾರಿಕೆಯನ್ನ ಸ್ಥಗಿತಗೊಳಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು ಎಂದಿದ್ದಾರೆ.

meeting
meeting
author img

By

Published : Jun 16, 2020, 2:21 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಮಾನ್ಸೂನ್ ಮುಗಿಯುವ ತನಕ ಮರಳುಗಾರಿಕೆ ಸ್ಥಗಿತಗೊಳಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರಳು ಗಣಿಗಾರಿಕೆಯನ್ನ ಜೂನ್ 6ರಿಂದ ಮಾನ್ಸೂನ್ ಮುಕ್ತಾಯವಾಗುವ ತನಕ ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸ್ಟಾಕ್‍ಯಾರ್ಡ್‍ಗಳಲ್ಲಿರುವ ಮರಳನ್ನು ನಿಗದಿತ ಕಾಲಮಿತಿಯ ಒಳಗಾಗಿ ಸಾಗಣೆ ಮಾಡಲು ಅವಕಾಶ ನೀಡಲಾಗುವುದು. ಮಾನ್ಸೂನ್ ಅವಧಿಯಲ್ಲಿ ಮರಳುಗಾರಿಕೆಗೆ ಅವಕಾಶ ನೀಡಬಾರದು. ತಾಲೂಕು ಮಟ್ಟದ ಸಮಿತಿಯು ಇದಕ್ಕೆ ಜವಾಬ್ದಾರಿಯಾಗಿರುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಮೇ ಅಂತ್ಯದವರೆಗೆ ಅಕ್ರಮ ಮರಳು ಸಾಗಣೆ ಸಂಬಂಧ 16 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, 1.48 ಲಕ್ಷ ರೂ. ದಂಡ ವಸೂಲು ಮಾಡಲಾಗಿದೆ. ಮರಳು ಸಾಗಣೆಯಿಂದ 24.23 ಲಕ್ಷ ರೂ. ರಾಜಧನ ಸಂಗ್ರಹಿಸಲಾಗಿದೆ. ಹೆಚ್ಚುವರಿ ನಿಯತಕಾಲಿಕ ಪಾವತಿ ಮೊತ್ತ 2.61 ಕೋಟಿ ರೂ. ಸಂಗ್ರಹಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆಯಿಂದ 8 ಲಕ್ಷ ರೂ. ರಾಜಧನ ದಂಡ ಪಡೆಯಲಾಗಿದೆ. ಕಟ್ಟಡ ಕಲ್ಲುಗಣಿಗಾರಿಕೆಯಿಂದ 8.78 ಲಕ್ಷ ರೂ. ರಾಜಧನ ಪಡೆಯಲಾಗಿದ್ದು, ಕಟ್ಟಡ ಕಲ್ಲು ಅಕ್ರಮ ಗಣಿಗಾರಿಕೆ ಮತ್ತು ಸಾಗಣೆಯಿಂದ 3.96 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಶ್ಮಿ ಮಾಹಿತಿ ನೀಡಿದರು.

ಅನಧಿಕೃತವಾಗಿ ಮರಳುಗಾರಿಕೆ, ಅಕ್ರಮ ಗಣಿಗಾರಿಕೆ ತಡೆಯಲು ತಪಾಸಣೆ ತೀವ್ರಗೊಳಿಸಬೇಕು ಮತ್ತು ಸರ್ಕಾರಿ ಆಸ್ತಿ ಕಳ್ಳತನದ ಮೊಕದ್ದಮೆ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಳ್ಳಕೊಳ್ಳದಿಂದ ಮರಳು ತೆಗೆಯಲು ಬ್ಲಾಕ್ ಗುರುತಿಸುವ ಕುರಿತು ತಾಲೂಕು ಮಟ್ಟದ ಸಮಿತಿಯಿಂದ ಶಿಫಾರಸು ಬಂದರೆ ಜಿಲ್ಲಾ ಮಟ್ಟದ ಟಾಸ್ಕ್‍ಫೋರ್ಸ್ ಸಮಿತಿ ಪರಿಶೀಲಿಸಿ ಅಧಿಸೂಚನೆ ಹೊರಡಿಸಲಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಯೋಜನಾ ನಿರ್ದೇಶಕ ವೀರಾಪುರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.