ETV Bharat / state

ಕುವೆಂಪು ಅವರನ್ನುಅವಮಾನ ಮಾಡಿದ್ದು ಸಿದ್ದರಾಮಯ್ಯ: ಸಚಿವ ಬಿ.ಸಿ ನಾಗೇಶ್ - b c nagesh on congress

ರಾಜ್ಯದ ಪಠ್ಯ ವಿವಾದ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗಳಿಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.

minister bc nagesh
ಸಚಿವ ಬಿ.ಸಿ ನಾಗೇಶ್
author img

By

Published : Jun 15, 2022, 12:38 PM IST

ಶಿವಮೊಗ್ಗ: ಕುವೆಂಪು ಅವರನ್ನು ಅವಮಾನ ಮಾಡಿದ್ದು ವಿಪಕ್ಷ ನಾಯಕ ಸಿದ್ದರಾಮಯ್ಯನವರೇ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಯಲಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಆಗ್ರಹಿಸಿದರು.

ಸಚಿವ ಬಿ.ಸಿ ನಾಗೇಶ್

ಪಠ್ಯ ಪುಸ್ತಕದಲ್ಲಿ ಕುವೆಂಪು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ನೈತಿಕತೆ ಇದ್ದರೆ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾತನಾಡಲಿ. ಅಂದು ಕುವೆಂಪು ನಾಡಗೀತೆ ತಿರುಚಿದ್ದು, ಅವರು ಮುಖ್ಯಮಂತ್ರಿ ಆಗಿದ್ದಾಗ (2017ರಲ್ಲಿ) ಒಂದೇ ಒಂದು ಕ್ರಮ ಕೂಡ ಕೈಗೊಳ್ಳಲಿಲ್ಲ. ಆಗ ಅದನ್ನು ಫಾರ್ವಡ್ ಮಾಡಿದ್ದ ರೋಹಿತ್ ಚಕ್ರತೀರ್ಥರ ಮೇಲೆ ಕೇಸ್ ಹಾಕಿದ್ದರು. ಅದಕ್ಕೂ ಅವರದೇ ಸರ್ಕಾರ ಬಿ ರಿಪೋರ್ಟ್ ಕೊಟ್ಟಿತ್ತು ಎಂದರು.

ಕುವೆಂಪು ಅವರ ರಾಮಾಯಣ ದರ್ಶನಂ ಪಾಠವನ್ನು ತೆಗೆದು ಅವಮಾನ ಮಾಡಿದ್ದು ಅವರೇ. ನಾವು ಈಗ ಪಬ್ಲಿಕ್ ಡೊಮೈನ್​​ಗೆ ಹಾಕುತ್ತೇವೆ ಎಂದಾಗ ಬೇಡದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ವೈಚಾರಿಕವಾಗಿ ಮಾತನಾಡಲು ಏನೂ ಇಲ್ಲ. ಹಾಗಾಗಿ ನಮ್ಮ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಅವರ ಕೈಯಲ್ಲಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ಜನರನ್ನು ದಾರಿ ತಪ್ಪಿಸಲು ಏನೇನೋ ಹೇಳುತ್ತಿದ್ದಾರೆ ಎಂದರು. ಇನ್ನೂ ಕೇಸರಿಕರಣ ಎಂದರೆ ಏನೆಂದು ಮೊದಲು ಹೇಳಲಿ. ಅದರ ಬಗ್ಗೆ ಮಾತನಾಡಲು ಸಿದ್ಧರಿದ್ದೇವೆ ಎಂದು ಶಿಕ್ಷಣ ಸಚಿವರು ತಿರುಗೇಟು ನೀಡಿದರು.

ಇದನ್ನೂ ಓದಿ: ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್ ಪಾಟೀಲ್‌ ಪ್ರಮಾಣ ವಚನ ಸ್ವೀಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.