ETV Bharat / state

ಬೆಳೆ ಸಮೀಕ್ಷೆ ಆ್ಯಪ್‌‌ ಪ್ರಾತ್ಯಕ್ಷಿಕೆ ನಡೆಸಿದ ಸಚಿವ ಬಿ.ಸಿ.ಪಾಟೀಲ್​​ - ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ

ಸಚಿವ ಬಿ.ಸಿ.ಪಾಟೀಲ್ ಬೆಳೆ ವಿವರ, ಸರ್ವೇ ನಂಬರ್ ಸೇರಿದಂತೆ ಜಮೀನಿನಲ್ಲಿನ‌ ತಮ್ಮ ಭಾವಚಿತ್ರವನ್ನು ಬೆಳೆ ಸಮೀಕ್ಷೆ‌‌ ಆ್ಯಪ್​​​ಗೆ ಅಪ್ಲೋಡ್ ಮಾಡಿದರು.

BC patil
BC patil
author img

By

Published : Aug 24, 2020, 9:55 AM IST

ಶಿವಮೊಗ್ಗ: ಕೃಷಿ ಸಚಿವ ಬಿ.ಸಿ.ಪಾಟೀಲ್ ಸೊರಬ ತಾಲೂಕಿನ ಯಲವಾಳ ಗ್ರಾಮದ ತಮ್ಮ ಜಮೀನಿನಲ್ಲಿ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದರು.

ಜಮೀನಿನಲ್ಲಿ ನಿಂತು ಬೆಳೆ ವಿವರ, ಸರ್ವೇ ನಂಬರ್ ಸೇರಿದಂತೆ ಜಮೀನಿನಲ್ಲಿನ‌ ತಮ್ಮ ಭಾವಚಿತ್ರವನ್ನು ಆ್ಯಪ್‌ನಲ್ಲಿ ಅಪ್ಲೋಡ್ ಮಾಡಿದರು.

ಈ ವೇಳೆ ಮಾತನಾಡಿದ ಬಿ.ಸಿ.ಪಾಟೀಲ್, ರೈತನ ಬೆಳೆ ರೈತನ ಹಕ್ಕಾಗಿದೆ. ದೇಶದಲ್ಲಿ ಮೊದಲ ಬಾರಿಗೆ ರೈತನೇ ಸ್ವತಃ ತನ್ನ ಹೊಲದ ಸಮೀಕ್ಷೆ ನಡೆಸಿ, ತಾನೇ ಪ್ರಮಾಣಪತ್ರ‌ ನೀಡುವಂತಹ ಮಹತ್ವದ ಆ್ಯಪ್ ಇದಾಗಿದ್ದು, ರೈತರು ಆ್ಯಪ್ ಸಮೀಕ್ಷೆ ಬಗ್ಗೆ ಹೆಚ್ಚು ಒಲವು ತೋರುತ್ತಿದ್ದಾರೆ‌ ಎಂದರು.

ಸಮೀಕ್ಷೆಗೆ ದೊರೆತಿರುವ ಅಭೂತಪೂರ್ವ ಸ್ಪಂದನೆ ಕಂಡು ಆಗಸ್ಟ್‌ 24ರವರೆಗೆ ನಿಗದಿಗೊಳಿಸಲಾಗಿದ್ದ ರೈತ ಬೆಳೆ ಆ್ಯಪ್ ಸಮೀಕ್ಷೆ ಅವಧಿಯನ್ನು ಇನ್ನೂ ಸ್ವಲ್ಪ ದಿನಗಳ ಕಾಲ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರ ಸಹ ರಾಜ್ಯದ ಈ ಕ್ರಾಂತಿಕಾರಕ ಹಾಗೂ ರೈತೋಪಯೋಗಿ ಆ್ಯಪ್ ಸಮೀಕ್ಷೆಯಿಂದ ಪ್ರೇರಿತಗೊಂಡಿದ್ದು, ದೇಶದ ಇತರೆ ಜಿಲ್ಲೆಗಳಲ್ಲಿಯೂ ಸಹ ಜಾರಿಗೊಳಿಸಲು ಮುಂದಾಗಿದೆ ಎಂದರು. ಈ ವೇಳೆ ಕೃಷಿ ಅಧಿಕಾರಿಗಳು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.