ಶಿವಮೊಗ್ಗ: ಸುಮಾರು 600 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ವಿವಿಧ ಕಾಮಗಾರಿಗಳಿಗೆ ಸಚಿವ ಸಿ.ಸಿ ಪಾಟೀಲ್ ಇಂದು ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇದರಲ್ಲಿ ಪ್ರಮುಖವಾಗಿ 516.96 ಕೋಟಿ ರೂ. ವೆಚ್ಚದ ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ ಮುಖ್ಯವಾಗಿದೆ.
ಉಳಿದಂತೆ 43.90 ಕೋಟಿ ರೂ. ವೆಚ್ಚದಲ್ಲಿ ನಗರದ ವಿದ್ಯಾನಗರದಲ್ಲಿ ವೃತ್ತಾಕಾರದ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ,ಮತ್ತು 20.12 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ತುಂಗಾ ನದಿಗೆ ಹಾಲಿ ಇರುವ ಸೇತುವೆ ಪಕ್ಕದಲ್ಲಿ ಮತ್ತೊಂದು ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ.
ಇದನ್ನೂ ಓದಿರಿ: ಬೆಂಗಳೂರಿನಲ್ಲಿ ಮುಂದುವರೆದ ವರುಣಾರ್ಭಟ... ಮುಂದಿನ ಎರಡು ದಿನ ಮಳೆ ಸುರಿಯುವ ಸಾಧ್ಯತೆ
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ,ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಶಾಸಕರು ,ವಿಧಾನ ಪರಿಷತ್ ಸದಸ್ಯರು ಹಾಗೂ ನಿಗಮ ಮಂಡಲಿಗಳ ಅಧ್ಯಕ್ಷರು ಉಪಸ್ಥಿತರಿರಲಿದ್ದಾರೆ.