ETV Bharat / state

ಶಿವಮೊಗ್ಗದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಾವಿನ ಪ್ರಮಾಣ: ವಿಶೇಷ ಸಮಿತಿ ರಚನೆಗೆ ಸುಧಾಕರ್​ ಸೂಚನೆ

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ಹೆಚ್ಚಿದೆ. ಹಾಗಾಗಿ ಬೆಂಗಳೂರಿನಿಂದ ವಿಶೇಷ ಸಮಿತಿ ಕಳುಹಿಸಿ ಸಾವಿನ ಪ್ರಮಾಣದ ಬಗ್ಗೆ ಹಾಗೂ ಚಿಕಿತ್ಸೆಯ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಆದೇಶಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Minister Dr Sudhakar
ಸಚಿವ ಡಾ. ಕೆ. ಸುಧಾಕರ್
author img

By

Published : Jun 12, 2021, 7:27 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆ ಬೆಂಗಳೂರಿನಿಂದ ವಿಶೇಷ ಸಮಿತಿ ರಚಿಸಿ ಸಾವಿನ ಬಗ್ಗೆ ಹಾಗೂ ಚಿಕಿತ್ಸೆಯ ಕುರಿತು ಸಮಗ್ರ ವರದಿ ನೀಡುವಂತೆ ಆದೇಶಿಸುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಸಚಿವ ಡಾ. ಕೆ. ಸುಧಾಕರ್

ಇಂದು ನಗರದ ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಕೋವಿಡ್ ಸ್ಥಿತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ಹೆಚ್ಚಿದೆ. ಇದಕ್ಕೆ ಕಾರಣ ಜನರು ಕೊನೆಯ ಹಂತದಲ್ಲಿ ಚಿಕಿತ್ಸೆಗೆ ಬರುತ್ತಿರುವುದು ಹಾಗೂ ಐಸಿಯುಗೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಬೆಂಗಳೂರಿನಿಂದ ವಿಶೇಷ ಸಮಿತಿ ಕಳುಹಿಸಿ ಸಾವಿನ ಪ್ರಮಾಣದ ಬಗ್ಗೆ ಹಾಗೂ ಚಿಕಿತ್ಸೆಯ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಆದೇಶಿಸುತ್ತೇನೆ ಎಂದರು.

ಸರ್ಕಾರಿ ವೈದ್ಯರು ಕೆಲಸದ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವುದನ್ನ ತಡೆಗಟ್ಟಲು ಹಾಗೂ ಅವರ ಮೇಲೆ ನೀಗ ಇಡಲು ಎಲ್ಲಾ ವಾರ್ಡ್​ಗಳಲ್ಲಿ ಹಾಗೂ ಐಸಿಯು ವಾರ್ಡ್​ಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಹಾಗೂ ಜಿಯೋ - ಫೆನ್ಸಿಂಗ್ ಅಳವಡಿಸುವ ಮೂಲಕ ಕೆಲಸದ ಅವಧಿಯಲ್ಲಿ ಬೇರೆಡೆ ಹೋಗದಂತೆ ಕ್ರಮ ಕೈಗೊಳ್ಳುತ್ತೇವೆ. ಇದನ್ನ ಮೀರಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಈ ಸಂದರ್ಭ ಸಿಮ್ಸ್ ನಿರ್ದೇಶಕ ಸಿದ್ದಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ಸೇರಿದಂತೆ ವೈದ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಓದಿ: ಮಲೆನಾಡಲ್ಲಿ 2022ರ ಜೂನ್ ಅಂತ್ಯದ ವೇಳೆಗೆ ವಿಮಾನ ಹಾರಾಟ: ಸಿಎಂ ಭರವಸೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.