ಶಿವಮೊಗ್ಗ : ಮಠಕ್ಕೆ ಯಾರು ಬೇಕಾದರೂ ಭೇಟಿ ನೀಡಿ ಆಶೀರ್ವಾದ ಪಡೆಯಬಹುದು. ಮಂತ್ರಿ ಆಗುವುದಕ್ಕೆ ಯಾರೂ ಮಠಕ್ಕೆ ಭೇಟಿ ನೀಡುವುದಿಲ್ಲ. ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಹೋಗಿರುತ್ತಾರೆ ಎಂದು ರಮೇಶ್ ಜಾರಕಿಹೊಳಿ ಸುತ್ತೂರು ಮಠಕ್ಕೆ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಠಕ್ಕೆ ಹೋದ್ರೆ ಸಚಿವ ಸ್ಥಾನ ಸಿಗುತ್ತದೆ ಎನ್ನುವುದಾದ್ರೆ ಎಲ್ಲರೂ ಮಠಗಳ ಮುಂದೆ ಕ್ಯೂ ನಿಲ್ಲುತ್ತಿದ್ದರು. ರಾಜಕೀಯದಲ್ಲಿ ಯಾರೂ ಸನ್ಯಾಸಿ ಅಲ್ಲ.
ರಮೇಶ್ ಜಾರಕಿಹೊಳಿ ಸಚಿವರಾಗೋದಕ್ಕೆ ಪ್ರಯತ್ನಪಡುವುದರಲ್ಲಿ ತಪ್ಪೇನೂ ಇಲ್ಲ ಎಂದು ಪರೋಕ್ಷವಾಗಿ ರಮೇಶ್ ಸಚಿವ ಸ್ಥಾನ ಪ್ರಯತ್ನಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಬೆಂಬಲ ನೀಡಿದ್ದಾರೆ.
ಓದಿ:ನಾರದ ಪ್ರಕರಣದಲ್ಲಿ ಬಂಗಾಳ ಸಿಎಂಗೆ ಬಿಗ್ ರಿಲೀಫ್ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ