ಶಿವಮೊಗ್ಗ : ನಗರದ ಮಿಲಘಟ್ಟ ವಾರ್ಡ್ನಲ್ಲಿ ನೀರಾವರಿ ಇಲಾಖೆಯ ವತಿಯಿಂದ ಒಂದು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಕಟ್ಟಡದ ಗುದ್ದಲಿ ಪೂಜೆಯನ್ನು ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಿದರು.
ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಬೇಕೆಂದು ಆದೇಶಿಸಿದೆ. ಆದರೆ, ಸರ್ಕಾರದ ಭಾಗವಾಗಿರುವ ಸಚಿವರೇ ಆದೇಶ ಲೆಕ್ಕಿಸದೇ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡದೇ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಮೇ ಅಂತ್ಯದವರೆಗೆ ಕೋವಿಡ್ ಸ್ಫೋಟವಾಗಲಿದೆ: ಡಾ.ಕೆ.ಸುಧಾಕರ್
ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿ ಮಹಾನಗರ ಪಾಲಿಕೆ ಮೇಯರ್ ಸಹ ಮಾಸ್ಕ್ ಹಾಕಿರಲಿಲ್ಲ. ಅಲ್ಲದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಸರ್ಕಾರದ ಆದೇಶ ಕಡೆಗಣಿಸಿದ್ದರು.