ETV Bharat / state

ಸರ್ಕಾರಿ ಶಾಲೆಗಳ ಕಾಮಗಾರಿ ವೀಕ್ಷಣೆ ನಡೆಸಿದ ಸಚಿವ ಈಶ್ವರಪ್ಪ

ಶಿವಮೊಗ್ಗ ನಗರದಲ್ಲಿ 86 ಸರ್ಕಾರಿ‌ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

Minister Eshwarappa
ಸರ್ಕಾರಿ ಶಾಲೆಗಳ ಕಾಮಗಾರಿ ವೀಕ್ಷಣೆ ನಡೆಸಿದ ಸಚಿವ ಈಶ್ವರಪ್ಪ
author img

By

Published : Nov 20, 2020, 3:24 PM IST

ಶಿವಮೊಗ್ಗ: ಸಚಿವ ಕೆ.ಎಸ್​. ಈಶ್ವರಪ್ಪ ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ ನಗರದಲ್ಲಿ 86 ಸರ್ಕಾರಿ‌ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ದುರಸ್ತಿಗೆ ಒಳಗಾಗಿದ ಶಾಲೆಯನ್ನು ಪಟ್ಟಿ ಮಾಡಿ ಅವುಗಳನ್ನು ರಿಪೇರಿ ನಡೆಸಲಾಗುತ್ತಿದೆ.

ಸರ್ಕಾರಿ ಶಾಲೆಗಳ ಕಾಮಗಾರಿ ವೀಕ್ಷಣೆ ನಡೆಸಿದ ಸಚಿವ ಈಶ್ವರಪ್ಪ

ನಗರದ ಕರ್ನಾಟಕ ಪಬ್ಲಿಕ್‌ ಶಾಲೆ, ಬಿ.ಬಿ.ರಸ್ತೆ ಶಾಲೆ, ದೊಡ್ಡಪೇಟೆ ಶಾಲೆ, ಭೂಪಾಳಂ ಶಾಲೆ, ಎಸ್.ಪಿ.ಎಂ ರಸ್ತೆಯ ಶಾಲೆಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಸಚಿವರು, ಕಾಮಗಾರಿಯನ್ನು ಗುಣಮಟ್ಟದಿಂದ ನಡೆಸಬೇಕೆಂದು ಗುತ್ತಿಗೆದಾರರಿಗೆ ತಿಳಿಸಿದರು. ಇನ್ನು ಕಾಮಗಾರಿ ಪ್ರಾರಂಭಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ, ವಾರ್ಡ್ ನಂಬರ್ 2 ರಲ್ಲಿನ 30 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರುಳಿಧರ್, ಡಿಡಿಪಿಐ ರಮೇಶ್ ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.